No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ: ಸಚಿವ ನಾರಾಯಣಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2022
in ಶಿವಮೊಗ್ಗ
0
ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ: ಸಚಿವ ನಾರಾಯಣಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಜಾಪ್ರಭುತ್ವದ ತಳಹದಿಯಾದ ಸಂವಿಧಾನವನ್ನು ಹಾಗೂ ಮಾನವ ಹಕ್ಕುಗಳನ್ನು ನೀಡಿದ ಈ ಸುದಿನದ ನೆನಪು ಅವಿಸ್ಮರಣೀಯ. ಇಂದು ಇಡೀ ದೇಶದಲ್ಲಿ ಕೊರೋನಾ ಆತಂಕದ ನಡುವೆಯೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕೊರೋನಾ ನಿರ್ವಹಣೆಗೆ ನಮ್ಮ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.

ಗಣರಾಜೋತ್ಸವ ದಿನ ಪ್ರಯುಕ್ತ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವುದು ನಮ್ಮ ಹೆಮ್ಮೆಯ ಕರ್ನಾಟಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಹಲವು ಹೊಸ ಯೋಜನೆಗಳ ಮೂಲಕ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಯುವ ಸಬಲೀಕರಣ, ನೀರಾವರಿ ಇನ್ನಿತರ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ ಎಂದು ಸಚಿವರು ತಿಳಿಸಿದರು.

ರೈತಾಪಿ ಕುಟುಂಬದ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಯೋಜನೆ, 58ಕ್ಕೂ ಅಧಿಕ ನಾಗರಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಜನಸೇವಕ ಎಂಬ ವಿನೂತನ ಕಾರ್ಯಕ್ರಮ, ಸುಮಾರು 800ರಷ್ಟು ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ-ಒನ್ ಎಂಬ ವಿಶೇಷ ಯೋಜನೆ, 33ಇಲಾಖೆಗಳ ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆಗಳ ನಿವಾರಣೆಗೆ ಜನಸ್ಪಂದನ ವ್ಯವಸ್ಥೆ, ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 14 ಅಮೃತ ಯೋಜನೆಗಳನ್ನು ಘೋಷಿಸಲಾಗಿದೆ. ಅಮೃತ ಸಮುದಾಯ ದತ್ತಿ ಅಭಿವೃದ್ಧಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಯುವ ಸ್ಪಂದನ ಕೇಂದ್ರಗಳನ್ನು ತೆರೆಯಲಾಗಿದ್ದು, ಯುವ ಜನತೆಯನ್ನು ಮಾನಸಿಕವಾಗಿ ಸದೃಢಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಸಂಪರ್ಕ ರಸ್ತೆಗಳು, ಸೇತುವೆಗಳು, ನೂತನ ರೈಲು ಮಾರ್ಗ ಸಂಪರ್ಕ, ಮೇಲ್ಸೇತುವೆಗಳು, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವ ಪಣ ತೊಡಲಾಗಿದೆ. ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯ 6 ತಾಲೂಕುಗಳಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಪಟುಗಳಿಗಾಗಿ ಹಾಸ್ಟೆಲ್‌ಗಳನ್ನು ಈ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಇದರಿಂದಾಗಿ ಸ್ಥಳೀಯವಾಗಿ ಯುವ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ದೃಢ ಹೆಜ್ಜೆ ಇರಿಸಿದ್ದೇವೆ. ನಮ್ಮ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಈಗಾಗಲೇ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ 268 ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 257 ಕಸ ಸಂಗ್ರಹಿಸುವ ಟಿಪ್ಪರ್‌ಗಳನ್ನು ಒದಗಿಸಲಾಗಿದೆ. ಪ್ರಸ್ತುತ ಹಣಕಾಸು ಸಾಲಿನಲ್ಲಿ ಜಿಲ್ಲೆಯಲ್ಲಿ 4409 ಶೌಚಾಲಯಗಳನ್ನು ಪೂರ್ಣಗೊಳಿಸಲಾಗಿದ್ದು, 5.29ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ 104ಕೋಟಿ ರೂ. ವೆಚ್ಚದಲ್ಲಿ ನಿರಂತರ ಕುಡಿಯುವ ನೀರು ಪೂರೈಸುವ ಕಲ್ಪಿಸುವ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಈಗಾಗಲೇ 32,900 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಶೇ.70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಒಂದು ವರ್ಷದೊಳಗೆ ಶಿವಮೊಗ್ಗ ನಗರದ 55,800 ಮನೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾನಗರಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ 2024ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಳ ಸಂಪರ್ಕ ಮೂಲಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗಿದ್ದೇವೆ. ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ 334 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 33 ಕಾಮಗಾರಿಗಳು ಪ್ರಗತಿಯಲ್ಲಿವೆ. ತಮ್ಮೆಲ್ಲರ ಸಹಕಾರದಿಂದಾಗಿ ವಿಶೇಷವಾಗಿ ಜಿಲ್ಲೆಯಲ್ಲಿ ಕರೋನಾದ ಒಂದು ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದು, ಪ್ರಸ್ತುತ ಮೂರನೇ ಅಲೆಯನ್ನು ಎದುರಿಸಲು ನಮಗೆ ಸಾಧ್ಯವಾಗಿದೆ. ಅದರೊಂದಿಗೆ ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಲಭ್ಯಗಳನ್ನು ಉನ್ನತೀಕರಿಸಲು ವ್ಯಾಪಕ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ.
ಇನ್ನೂ ಕೊರೊನಾ ಮಹಾಮಾರಿ ದೂರವಾಗಿಲ್ಲ. ಆದ್ದರಿಂದ ಸರ್ಕಾರದ ನಿಯಮಗಳನ್ನು ಚಾಚುತಪ್ಪದೇ ಪಾಲಿಸುತ್ತಾ ಸುರಕ್ಷಿತವಾಗಿರೋಣ ಎಂದು ಸಚಿವ ನಾರಾಯಣಗೌಡ ಅವರು ಕರೆ ನೀಡಿದರು.

ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು.

ಶಿವಮೊಗ್ಗ ಸಂಸದ  ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಡಿ.ಎಸ್. ಅರುಣ್, KSSIDC ಉಪಾಧ್ಯಕ್ಷ ಎಸ್ ದತ್ತಾತ್ರಿ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸ್ವಾತಂತ್ರ್ಯದ ಬಗ್ಗೆ ನಮ್ಮ ಬದ್ಧತೆಯನ್ನು ಘೋಷಿಸಲು ಗಣರಾಜ್ಯೋತ್ಸವ ಒಂದು ಮಾಧ್ಯಮ: ಡಾ. ಸುರೇಶ್ ಅಭಿಪ್ರಾಯ

Next Post

ಎಲ್ಲಾ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುತ್ತೇನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲಾ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುತ್ತೇನೆ

ಎಲ್ಲಾ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುತ್ತೇನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL