ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನ್ಯ ಕೋಮಿನ ವ್ಯಕ್ತಿಗಳಿಂದ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದ ಪ್ರೇಮ್ ಸಿಂಗ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಮತ್ತೆ ಮೆಗ್ಗಾನ್ ಆಸ್ಪತೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.
ನಗರದ ಎಎ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಗಲಾಟೆಯಾಗುತ್ತಿದ್ದ ಸಂದರ್ಭದಲ್ಲಿ ಕಸ್ತೂರ ಬಾ ರಸ್ತೆಯಲ್ಲಿ ಯುವಕನೋರ್ವನಿಗೆ ಚಾಕು ಇರಿಯಲಾಗಿತ್ತು. ಇದರಿಂದ ಗಾಯಗೊಂಡ ಪ್ರೇಮ್ ಸಿಂಗ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿತ್ತಾದರೂ, ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮೆಗ್ಗಾನ್‌ನ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದಾನೆ ಎನ್ನಲಾಗಿದೆ.
Also read: ರಾಜಕಾರಣದಲ್ಲಿ ದೋಷಣೆ ಸಾಮಾನ್ಯ, ಅಧಿಕಾರದಲ್ಲಿದ್ದವರು ಸಹಿಸಿಕೊಳ್ಳಬೇಕು: ಡಿ.ಕೆ. ಶಿವಕುಮಾರ್











Discussion about this post