ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇನ್ನೊಂದು ವಾರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗುವ ಸಂಭವವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಶಿವಮೊಗ್ಗದಿಂದ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಪ್ರಥಮ ಹಂತದಲ್ಲಿ ಶಿವಮೊಗ್ಗ – ಬೆಂಗಳೂರು ನಡುವೆ ಪ್ರತಿದಿನ ವಿಮಾನ ಹಾರಾಟ ಆರಂಭವಾಗಲಿದೆ. ಮುಂದೆ ಸರ್ವೆ ನಡೆಸಿ, ಬೇರೆ ಪ್ರದೇಶಗಳಿಗೆ ವಿಮಾನಯಾನ ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನಯಾನ ಸೇವೆಗೆ ಪ್ರತಿ ಪ್ರಯಾಣಿಕನ ಟಿಕೆಟ್ ಗೆ 500 ರೂ. ಸಬ್ಸಿಡಿ ನೀಡಬೇಕು ಎಂಬ ಒತ್ತಾಯವಿದೆ. ಇದರಿಂದ ಪ್ರತಿದಿನ 73 ಸಾವಿರ ರೂ. ಹೊರೆಯಾಗಲಿದೆ. ವಾರ್ಷಿಕ ಅಂದಾಜು ಎರಡೂವರೆ ಕೋಟಿ ರೂ. ಹಣವನ್ನು ವಿಮಾನಯಾನ ಸಂಸ್ಥೆಗೆ ರಾಜ್ಯ ಸರ್ಕಾರ ನೀಡಬೇಕಾಗುತ್ತದೆ ಎಂದರು.
Also read: ಮಾ.25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ ಸಮಾವೇಶ: ಈಶ್ವರಪ್ಪ
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಸೂಚನೆಯಂತೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದುಬೈನಿಂದ ಮೂರು ಅಗ್ನಿಶಾಮಕ ವಾಹನಗಳನ್ನು ಖರೀದಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post