ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶಿವಮೊಗ್ಗ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಶ್ರಾಯದಲ್ಲಿ ಜು.27ರ ನಾಳೆ ಬೆಳಿಗ್ಗೆ 10ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭವನ್ನು ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ವಹಿಸಲಿದ್ದಾರೆ.
Also read: ಪ್ರತಿಯೊಬ್ಬ ಹುತಾತ್ಮ ಯೋಧ ನಮ್ಮ ಯುವಪೀಳಿಗೆಗೆ ಸ್ಫೂರ್ತಿ: ಮಾಜಿ ಸೈನಿಕ ದಶವಂತ್

ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎನ್. ರವಿಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್ ಶ್ರೀಲಂಕಾದ ಭಾರತದ ಸಂಚಾಲಕ ಹೆಚ್.ಬಿ.ಮದನಗೌಡ, ಮಹಾನಗರ ಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ್, ವಾರ್ತಾಧಿಕಾರಿ ಮಾರುತಿ ಆರ್., ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ ಬಂಡಿಗಡಿ ನಂಜುಂಡಪ್ಪ ಆಗಮಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post