ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಲಾಕ್‌ಡೌನ್ ನಂತರ ಮೊದಲ ಬಾರಿಗೆ ಶಾಲೆಗೆ ಆಗಮಿಸಿದ ಮಕ್ಕಳಿಗೆ ನಗರದ ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಸಿಹಿ ನೀಡುವ ಮೂಲಕ ಸ್ವಾಗತಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕೊರೋನಾದಿಂದ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುವವರೆಗೆ ರಾಜ್ಯದಾದ್ಯಂತ ಸರ್ಕಾರ ಎಲ್ಲಾ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಆದೇಶಿಸಿತ್ತು.
ಕಳೆದ ತಿಂಗಳಿನಿಂದ 9ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿ ಪುನಾರಂಭವಾಗಿದೆ. ಹಾಗೂ ಪ್ರಸ್ತುತ ಕೋವಿಡ್ ಹತೋಟಿಯಲ್ಲಿರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳು ಪ್ರಾರಂಭವಾಗಿದೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಎಸ್ ಲೋಹಿತ್ ಕುಮಾರ್ ಶಿಕ್ಷಕರಾದ ಪದ್ಮಾವತಿ, ಎನ್. ಟಿ. ರವಿಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post