ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರೀಕ್ಷೆ ವೇಳೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಮಾ.18ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವುದರಿಂದ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾಥಿಗಳಿಗೆ ಯಾವುದೇ ತೊಂದರೆ ಆಗದಂದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ಈಗಾಗಲೇ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಡಿ.18ರಂದು ಪರೀಕ್ಷೆ ಇದೆ. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಸಂಚಾರ ವ್ಯತ್ಯಯವೂ ಆಗುವ ಸಂಭವವಿರುತ್ತದೆ. ಹೀಗಾಗಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತ ನೋಡಿಕೊಳ್ಳುವುದಾಗಿ ಅವರು ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















