ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರ 75 ನೇ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇಂದು ಭದ್ರಾವತಿಯ ಬಿಜೆಪಿ ಕಾರ್ಯಾಲಯದಲ್ಲಿ ಭದ್ರಾವತಿ ನಗರ ಮಂಡಲ ಯುವಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ #Dr. Dhananjaya Sarji ಸತತ 68 ನೇ ಯ ಬಾರಿ ರಕ್ತದಾನವನ್ನು ಮಾಡಿ ಮಾದರಿಯಾಗಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಕೂಡ ರಕ್ತದಾನ ಮಾಡಿದರು.
ಶಿಬಿರದಲ್ಲಿ ಭದ್ರಾವತಿ ನಗರ ಮಂಡಲ ಅಧ್ಯಕ್ಷರಾದ ಧರ್ಮಪ್ರಸಾದ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಆನಂದ್ , ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ರಕ್ತದಾನ ಶಿಬಿರ ಸಂಚಾಲಕ ಧನುಷ್, ನರಸಭಾ ಸದಸ್ಯರಾದ ಅನುಪಮಾ ಚನ್ನೇಶ್, ಪ್ರಮುಖರಾದ ಶಿವಕುಮಾರ್, ಚನ್ನೇಶ್, ರಘುರಾಮ್, ಮಂಜಣ್ಣ ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post