ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 25 ರಂದು ಶಿವಮೊಗ್ಗ ಆಗಮಿಸುತ್ತಿದ್ದು, ನಗರಕ್ಕೆ ಭೇಟಿ ನೀಡಲಿದ್ದು, ದಾವಣಗೆರೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಬಳಿಕ ಪ್ರಧಾನಿ ಹೆಲಿಕಾಫ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ ಹೆಲಿಕಾಫ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದು ನಂತರ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ.
Also read: ಸಾಗರದ ಖಾಸಗಿ ಆಸ್ಪತ್ರೆಯ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಆರಂಭಗೊಂಡು 15 ದಿನಗಳು ಕಳೆದಿದ್ದು, 151 ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ವಿಜಯ ಸಂಕಲ್ಪಯಾತ್ರೆಯನ್ನ ಮುಗಿಸಲಾಗಿದೆ. 335 ಎಂಎಲ್ ಸಿ ಎಂಎಲ್ ಎ ಸಂಸದರು ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. 110 ರೋಡ್ ಶೋ, 41 ಬಹಿರಂಗ ಸಭೆಗಳನ್ನು ಬಿಜೆಪಿ ಪೂರ್ಣಗೊಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post