ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬರುವ ನವೆಂಬರ್‌ವರೆಗೆ ದೇಶದ ಜನತೆಗೆ ಉಚಿತವಾಗಿ ಕೊರೋನಾ ಲಸಿಕೆ ಮತ್ತು ಪಡಿತರವನ್ನು ನೀಡುತ್ತಿರುವ ಸೂಪರ್ ಲೀಡರ್ ನಮ್ಮ ಪ್ರಧಾನಿ ನರೇಂದ್ರ ಮೋದಿ ಇವರ ಬಗ್ಗೆ ದೇಶದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮಲೆನಾಡಿನಲ್ಲಿ ಚೆನ್ನಾಗಿ ಮಳೆಯಾದ ಪರಿಣಾಮ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ತುಂಗೆಯು ಶಾಂತ ರೀತಿಯಲ್ಲಿ ಹರಿಯಲು ನಗರದ ಮಹಿಳಾ ಕಾರ್ಯಕರ್ತರಿಂದ ಇಂದು ನದಿಗೆ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಜಾಸ್ತಿಯಾಗುತ್ತಿದೆ. ಅದರೆ ಇದು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಕೋವಿಡ್ ನಿರ್ವಹಣೆಗೂ ಚುನಾವಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಒಂದು ವೇಳೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿದಲ್ಲಿ, ನಾವೂ ಕೂಡ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ಮತ್ತು ಪಡಿತರ ವಿತರಣೆ ಮಾಡಿರುವುದನ್ನು ಸಾರ್ವಜನಿಕರ ಗಮನಕ್ಕೆ ತರುತ್ತೇವೆ ಎಂದು ಸಚಿವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post