ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭದ್ರಾವತಿ ಮೂಲದ ಖೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ವಿಚಾರಣಾಧೀನ ಖೈದಿ ಸೆಲ್‌ನಲ್ಲಿದ್ದ ಭದ್ರಾವತಿಯ ಕರುಣಾಕರ ದೇವಾಡಿಗ (24) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಂದು ಮುಂಜಾನೆ 7 ಗಂಟೆ ಸಮಯದಲ್ಲಿ ಖೈದಿಗಳಿಗೆ ತಿಂಡಿ ಕೊಡುವ ವೇಳೆಯಲ್ಲಿ ಸೆಲ್‌ನ ಕಿಟಕಿಗೆ ಮೈ ಉಜ್ಜುವ ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ.
ಕೊಲೆ ಪ್ರಕರಣ ಒಂದರಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಕರುಣಾಕರ ಜೈಲು ಸೇರಿದ್ದರಿಂದ ಮಾನಸಿಕವಾಗಿ ಖಿನ್ನನಾಗಿದ್ದನು. ಆತನಿಗೆ ವೈದ್ಯರು ಸಹ ಕೌನ್ಸೆಲಿಂಗ್ ಮಾಡಿದ್ದರು ಎನ್ನಲಾಗಿದೆ.
Also read: ಚುನಾವಣೆ ಹಿನ್ನೆಲೆ: ಮೇ.10ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ
ತುಂಗಾ ನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post