ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರದ ಹೊರವಲಯ ರಾಜ್ಯ ಹೆದ್ದಾರಿ 766 ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನ ಎಡಭಾಗಕ್ಕೆ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ.
ಬಸ್‌ನಲ್ಲಿದ್ದ 11 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಬಸ್‌ನಲ್ಲಿರುವ ಪ್ರಯಾಣಿಕರು ಕೊಲ್ಲೂರು ದೇವಸ್ಥಾನ, ಗೃಹಪ್ರವೇಶ, ಮದುವೆ ಮನೆಗಳಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಶುಭ ಸಮಾರಂಭಗಳಿಗೆ ತೆರಳುವ ಮುನ್ನ ಆಸ್ಪತ್ರೆ ದರ್ಶನ ಮಾಡುವ ಸಂದರ್ಭ ಒದಗಿ ಬಂದಿದೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















