ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಂದಿನಿಂದ ನಗರದಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆಯಾದರೂ ಪ್ರಯಾಣಿಕರ ಕೊರತೆ ಎದುರಿಸುವಂತಾಗಿದೆ.
ಇಂದು ಸುಮಾರು 100 ಬಸ್‌ಗಳು ಸಂಚಾರ ಆರಂಭಿಸಿದ್ದು, ಬೆರಳಣಿಕೆಯಷ್ಟು ಮಾತ್ರ ಪ್ರಯಾಣಿರು ಖಾಸಗಿ ಬಸ್‌ನಲ್ಲಿ ಸಂಚಾರ ಮಾಡುತ್ತಿರುವುದು ಕಂಡುಬಂದಿದೆ.
ಶಿವಮೊಗ್ಗ ಜಿಲ್ಲಾ ಕೇಂದ್ರಕ್ಕೆ ಮಂಗಳೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಿಂದ ಬಸ್‌ಗಳು ಆಗಮಿಸುತ್ತಿದ್ದು, ಜಿಲ್ಲೆಯ ಬಹುತೇಕ ಕಡೆ ಖಾಸಗಿ ಬಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿವೆ.
ಕೆಲವು ಖಾಸಗಿ ಬಸ್‌ಗಳು ಪ್ರಯಾಣ ದರವನ್ನ ಹೆಚ್ಚಿಸಿದ್ದು, ಡಿಸೇಲ್ ದರ ಹೆಚ್ಚಾಗಿದ್ದರಿಂದ ಶೇ.30ರಷ್ಟು ಹೆಚ್ಚಿಸುವಂತೆ ಖಾಸಗಿ ಬಸ್‌ಗಳ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು.
ಜಿಲ್ಲೆಯಾದ್ಯಂತ ಖಾಸಗಿ ಬಸ್‌ಗಳು ಸಂಚರಿಸಿರುವ ಬೆನ್ನಲ್ಲೇ ನಗರದ ಖಾಸಗಿ ಸಾರಿಗೆ ಬಸ್‌ಗಳು ಸಹ ರಸ್ತೆಗಿಳಿದಿವೆ. 65 ನಗರ ಸಾರಿಗೆ ಬಸ್‌ಗಳಿದ್ದು, ಅವುಗಳಲ್ಲಿ ಇಂದು 10 ರಿಂದ 15 ಬಸ್‌ಗಳು ಮಾತ್ರ ಸಂಚಾರ ಆರಂಭಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post