ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮೋ ಬ್ರಿಗೇಡ್ Namo Brigade ವತಿಯಿಂದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ Chakravathi Sulibele ಅವರ ಉಪನ್ಯಾಸವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರವಿರೋಧ ವಾಗ್ವಾದಗಳು ನಡೆದವು.
ಇನ್ನು ಮಲಗಿದರೆ ಏಳುವಾಗ ಭಾರತ ಇರುವುದಿಲ್ಲ ಎಂಬ ವಿಚಾರದ ಕುರಿತಾಗಿ ನಮೋ ಬ್ರಿಗೇಡ್ ವತಿಯಿಂದ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸವನ್ನು ಇಂದು ಸಂಜೆ ಆಯೋಜಿಸಲಾಗಿತ್ತು. ಆದರೆ, ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕರ್ನಾಟಕ ಸಂಘದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತೆಯರೂ ಸಹ ಪಾಲ್ಗೊಂಡಿದ್ದರು. ದ್ವೇಷದ ಭಾಷಣ ಮಾಡುವ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾನಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊರಕೆಗಳನ್ನು ಹಿಡಿದು ಪುರುಷ ಹಾಗೂ ಮಹಿಳಾ ಕಾರ್ಯಕರ್ತೆರು ಘೋಷಣೆಗಳನ್ನು ಕೂಗಿದರು.
Also read: ಇಂಗ್ಲೀಷ್’ನಂತಲ್ಲ, ನಮ್ಮ ಭಾಷೆಯಲ್ಲಿ ಏನನ್ನು ಬರೆಯುತ್ತೇವೋ, ಅದನ್ನೇ ಓದುತ್ತೇವೆ: ಪೇಜಾವರ ಶ್ರೀ
ಇನ್ನು, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಮೋದಿ…ಮೋದಿ…ಮೋದಿ… ಜೈ ಶ್ರೀರಾಮ್ ಘೋಷಣೆ ಕೂಗಿದರು.
ಗೋಮೂತ್ರ ಸಿಂಪಡನೆ
ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದ ಬಿಎಚ್ ರಸ್ತೆಯ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಗೋಮೂತ್ರ ಸಿಂಪಡನೆ ಮಾಡಿ ಶುದ್ಧೀಕರಣ ಮಾಡಿದರು.
ಬಿಗಿ ಪೊಲೀಸ್ ಭದ್ರತೆ
ಸೂಲಿಬೆಲೆ ಅವರ ಉಪನ್ಯಾಸಕ್ಕೆ ನಾಲ್ಕೈದು ದಿನಗಳ ಹಿಂದೆಯಿಂದಲೂ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸಂಘದ ಕಟ್ಟಡ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post