ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ಈದ್ ಮಿಲಾದ್ Eid Milad ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ನಂತರದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಗಲಾಟೆ ಪ್ರಕರಣ ಸಧ್ಯಕ್ಕ ನಿಯಂತ್ರಣದಲ್ಲಿದ್ದರೂ, ಯಾವುದೇ ಅಹಿತರಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ನಿಷೇಧಾಜ್ಞೆ 144 Section ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
Also read: ರಾಗಿಗುಡ್ಡದಲ್ಲಿ ಕಲ್ಲು ತೂರಾಟ: ಎಸ್ಪಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ನಿಷೇಧಾಜ್ಞೆ ವೇಳೆ ಪಾಲಿಸಬೇಕಾದ ನಿಬಂಧನೆಗಳೇನು?
- ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೆ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.
- ಘೋಷಣೆಗಳನ್ನು ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಕಟ್ಟುವುದನ್ನು ನಿಷೇಧಿಸಲಾಗಿದೆ.
- ಮಾರಕಾಸ್ತ್ರ, ಸ್ಪೋಟಕ ಹೊಂದುವುದು, ಅವುಗಳನ್ನು ಹಿಡಿದು ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















