ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2021 ರ ಸಂಬಂಧ ಡಿಸೆಂಬರ್ 10 ರಂದು ಮತದಾನ ಕಾರ್ಯ ನಡೆದಿದ್ದು, ಮತ ಎಣಿಕೆ ಕಾರ್ಯ ಡಿಸೆಂಬರ್ 14 ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ. ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜಿನ ವ್ಯಾಪ್ತಿಯಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 15 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಳಾದ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.
ನಿಷೇಧಾಜ್ಞೆ ವೇಳೆ ಮತ ಎಣಿಕೆ ಕೇಂದ್ರದ ಆವರಣದ ಹೊರಗೆ 100 ಮೀ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದು, ಪಟಾಕಿ ಹೊಡೆಯುವುದು, ಆಯುಧಗಳು, ಸ್ಪೋಟಕ ವಸ್ತುಗಳನ್ನು ಹೊಂದುವುದು, ಸಾಗಿಸುವುದನ್ನು ನಿಷೇಧಿಸಲಾಗಿದೆ.
ಮತಎಣಿಕೆ ಕೇಂದ್ರದ ಪರಿಮಿತಿ 1 ಕಿ.ಮೀ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಭಾರೀ ಪ್ರಮಾಣದಲ್ಲಿ ಜನ ಗುಂಪುಗಾರಿಕೆ/ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post