ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ #Bajarangadala activist Harsha murder ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಸರ್ಕಾರ ಬಹಿರಂಗ ಪಡಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ #Nalin Kumar Kateel ಹೇಳಿದರು.
ಅವರು ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
Also read: ದುಷ್ಕೃತ್ಯ ನಡೆಸುತ್ತಿರುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಜನರನ್ನು ಬಂಧಿಸಲಾಗಿದೆ. ಘಟನೆ ನಡೆದ ನಂತರ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಲ್ಲಿ ಶಿವಮೊಗ್ಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಪರಿಸ್ಥಿತಿ ಈಗ ಹತೋಟಿಯಲ್ಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ದುಷ್ಕೃತ್ಯ ನಡೆಸಿರುವ ಹಂತಕರು ಯಾವುದೇ ರೀತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ಬಂಧಿತರ ವಿಚಾರಣೆಯೂ ಆಗುತ್ತಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಹಾಗೂ ಈಗಾಗಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ ಎಂದರು.
ಕುಟುಂಬಕ್ಕೆ ಸಾಂತ್ವನ ಹೇಳಿದ ಕಟೀಲ್, ಹರ್ಷನ ತಾಯಿಗೆ ಊಟ ಮಾಡುವಂತೆ ಮನವಿ ಮಾಡಿದರು. ಹಾಗೂ ಧೈರ್ಯ ತಂದುಕೊಳ್ಳಿ. ನಿಮ್ಮ ಜೊತೆ ನಾವಿದ್ದೇವೆ. ಸರ್ಕಾರದಿಂದ ಅಗತ್ಯ ನೆರವು ಕೊಡಲು ಪ್ರಯತ್ನಿಸುತ್ತೇವೆ. ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು.
ಸಚಿವ. ಕೆ.ಎಸ್. ಈಶ್ವರಪ್ಪ #Minister Eshwarappa ಮಾತನಾಡಿ, ಹರ್ಷನ ಹತ್ಯೆಯಾಗುತ್ತದೆ ಎಂಬ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ರಾಜ್ಯ ಸರ್ಕಾರ ಈಗಾಗಲೇ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ ಏನು ಸಹಕಾರಬೇಕೋ ಅದನ್ನು ನೀಡುತ್ತೇವೆ. ರಾಜ್ಯಾಧ್ಯಕ್ಷರು ಕೂಡ ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.
AAlso read: ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮಾಜಿ ಜಿ.ಪಂ. ಸದಸ್ಯ ಕೆ.ಇ. ಕಾಂತೇಶ್, ಶಾಸಕ ಅಶೋಕ್ ನಾಯ್ಕ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಭಾನುಪ್ರಕಾಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ ಡಿ ಮೇಘರಾಜ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post