ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ಹುಟ್ಟುಹಬ್ಬದ ಅಂಗವಾಗಿ “ಸ್ವಸ್ಥ ನಾರಿ – ಸಶಕ್ತ ಭಾರತ” ಅಭಿಯಾನಕ್ಕೆ ಇಂದು ಶಿವಮೊಗ್ಗದ ತುಂಗಾ ನಗರ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ಮಹಿಳೆಯರ ಸ್ವಾಸ್ಥ್ಯ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನುರಿತ ವೈದ್ಯರಿಂದ ಸೂಕ್ತ ಸಲಹೆ ಸೂಚನೆ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗುರುತುಪಡಿಸಿದ ಸ್ಥಳಗಳಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೂಡ ಹಮ್ಮಿಕೊಳ್ಳುವ ಯೋಜನೆ ಇದಾಗಿದೆ. ಮಹಿಳೆಯರ ಮಾನಸಿಕ ಆರೋಗ್ಯ ಸೇವೆ ಒದಗಿಸುವುದು, ಗರ್ಭಿಣಿ ಸ್ತ್ರೀಯರಿಗೆ ಮಾರ್ಗದರ್ಶನ ನೀಡುವುದು, ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವುದು ಈ ಯೋಜನೆಯಲ್ಲಿ ಒಳಗೊಂಡಿದೆ ಎಂದರು.
ಕುಟುಂಬದ ಸಂಪೂರ್ಣ ಹೊಣೆಗಾರಿಕೆ ಮಾಡುತ್ತಾ, ಕುಟುಂಬದ ಆಗು ಹೋಗುಗಳನ್ನು ಗಮನಿಸುತ್ತಾ ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳೆಯರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ನನ್ನೆಲ್ಲ ತಾಯಂದಿರು ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ನಾನು ಮನವಿ ಮಾಡುತ್ತಾ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ದೃಢ ಹೆಜ್ಜೆ ಇಡುವ ಸಂಕಲ್ಪ ಮಾಡೋಣ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post