ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಡಿ ಅಧಿಕಾರಿಗಳು ಸೋನಿಯಾ ಗಾಂಧಿ Sonia Gandhi ಅವರನ್ನು ವಿಚಾರಣೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದಲೂ ಹೋರಾಟ ನಡೆಸಲಾಯಿತು.
ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಇವರನ್ನು ಪೊಲೀಸರು ತಡೆದು ವಿಫಲಗೊಳಿಸಿದ್ದಾರೆ.
Also read: ದೇಶದಾದ್ಯಂತ ಮೆಂಟಲ್ ಹೆಲ್ತ್ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ
ಜಿಲ್ಲಾಧಿಕಾರಿಗಳ ಕಚೇರಿಗೆ ಇಂದು ಮುಂಜಾನೆಯಿಂದಲೇ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದನ್ನು ಮೀರಿ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದ್ರುವ ನಾರಾಯಣ್, ಸೈಯದ್ ಅಹಮದ್, ಕಿಮ್ಮನೆ ರತ್ನಾಕರ್, ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಉಪಾಧ್ಯಕ್ಷರು ಜಿಲ್ಲಾ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















