No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಪ್ರತಿಭಟನೆ ಸುದ್ಧಿ: ಇಲ್ಲಿದೆ ನೋಡಿ

kalpa News by kalpa News
February 21, 2023
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಪ್ರತಿಭಟನೆ ಸುದ್ಧಿ: ಇಲ್ಲಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಹುಬ್ಬಳ್ಳಿ ವಿಭಾಗದ ವತಿಯಿಂದ ನೀಡಿದ ಕರೆ ಅನ್ವಯ ಇಂದು ಶಿವಮೊಗ್ಗ ಶಾಖೆ ವತಿಯಿಂದ ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗ ಪ್ರತಿಭಟನಾ ಧರಣಿ ನಡೆಸಲಾಯಿತು.

ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿಗೊಳಿಸಬೇಕು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಕಾರ್ಮಿಕರ ಹುದ್ದೆಗಳನ್ನು ಭರ್ತಿಮಾಡಬೇಕು. ರೈಲ್ವೆ ಖಾಸಗೀಕರಣವನ್ನು ಮಾಡಬಾರದು ಎಂದು ಆಗ್ರಹಿಸಿ ರೈಲ್ವೆ ಹುಬ್ಬಳ್ಳಿ ವಿಭಾಗದ ಕಾರ್ಮಿಕ ಸಂಘಟನೆಗಳು ನೀಡಿದ ಕರೆ ಅನ್ವಯ ಶಿವಮೊಗ್ಗದಲ್ಲೂ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಲಾಯಿತು.

ಕೇಂದ್ರ ಸರ್ಕಾರ ಕೂಡಲೆ ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮಾ.21ಕ್ಕೆ ರೈಲ್ವೆ ಕಾರ್ಮಿಕರ ಕುಟುಂಬದ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಏ.21ಕ್ಕೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮೇ.21ಕ್ಕೆ ದೆಹಲಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಒಪ್ಪದಿದ್ದಲ್ಲಿ ಉಗ್ರಸ್ವರೂಪದ ಹೋರಾಟಕ್ಕೆ ಕಾರ್ಮಿಕ ಸಂಘಟನೆ ಮುಂದಾಗಲಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘಟನೆ ಕೂಡ ನಮ್ಮ ಈ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಚನ್ನಪ್ಪಗೌಡ ಮತ್ತಿತರರಿದ್ದರು.
ವಿ.ಐ.ಎಸ್.ಎಲ್ ಕಾರ್ಖಾನೆಯ ಉಳಿವಿಗಾಗಿ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ
ಭದ್ರಾವತಿಯ ಪ್ರತಿಷ್ಟಿತ ವಿ.ಐ.ಎಸ್.ಎಲ್ ಕಾರ್ಖಾನೆಯ ಉಳಿವಿಗಾಗಿ ಇಂದು ಸರ್‌ಎಂವಿ ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ, ಭದ್ರಾವತಿ ನಗರದಲ್ಲಿರುವ 1923 ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾದ ಭಾರತ ರತ್ನ ವಿಶ್ವೇಶ್ವರಯ್ಯರವರ ಸಹಕಾರದಿಂದ ವಿಶ್ವೇಶ್ವರಯ್ಯ ಐರನ್ & ಸ್ಟೀಲ್ ಲಿ., ಕೈಗಾರಿಕೆಯನ್ನು ಸ್ಥಾಪಿಸಲಾಯಿತು. ಈ ಕೈಗಾರಿಕೆಯು ಏ? ಖಂಡದ ಪ್ರಪ್ರಥಮ ಐರನ್ & ಸ್ಟೀಲ್ ಕಂಪನಿಯಾಗಿದ್ದು, ಭಾರತದ ಸೈನ್ಯದ ಗುಂಡು ತಯಾರಿಕೆಗೆ ಉತ್ಕೃ? ಗುಣಮಟ್ಟದ ಕಬ್ಬಿಣವನ್ನು ಸರಬರಾಜು ಮಾಡುತ್ತಿದ್ದ ಹೆಗ್ಗಳಿಕೆಯ ಕೈಗಾರಿಕೆಯಾಗಿರುತ್ತದೆ.

ಸಾವಿರಾರು ಜನ ಕಾರ್ಮಿಕರಿಗೆ ಅನ್ನವನ್ನು ನೀಡಿದ ಕೈಗಾರಿಕೆಯಾಗಿದ್ದು, ಅಲ್ಲದೆ ಕರ್ನಾಟಕ ರಾಜ್ಯ ಹಾಗೂ ದೇಶದ ಹೆಮ್ಮೆಯ ಕೈಗಾರಿಕೆಯಾಗಿರುತ್ತದೆ. ಇತ್ತೀಚೆಗೆ ಸೈಲ್ ( SಂIಐ ) ಅಥಾರಿಟಿಯು ಮೇಲ್ಕಂಡ ಕೈಗಾರಿಕೆಯ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ತೀರ್ಮಾನಿಸಿರುವ ಕಾರಣ ಕರ್ನಾಟಕ ರಾಜ್ಯದ ಸಾರ್ವಜನಿಕ ವಲಯದ ಹೆಮ್ಮೆಯ ಈ ಕೈಗಾರಿಕೆ ಇತಿಹಾಸದ ಪುಟದಲ್ಲಿ ಸೇರಿಕೊಂಡು ನೆನಪು ಮಾತ್ರವಾಗಲಿದೆ. ಆದ ಕಾರಣ ಮಲೆನಾಡಿನ ಹೆಮ್ಮೆಯ ಉಕ್ಕು ಹಾಗೂ ಕಬ್ಬಿಣದ ಈ ಕೈಗಾರಿಕೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ಆತ್ಮನಿರ್ಭರ ಹಾಗೂ ಮೇಕಿನ್ ಇನ್ ಇಂಡಿಯಾ ಯೋಜನೆಯ ಪ್ರತಿಪಾದಕರಾದ ತಾವು ಭಾರತ ದೇಶದ ಪುರಾತನವಾದ ಈ ಹೆಮ್ಮೆಯ ಯೋಜನೆಗೆ ಅಗತ್ಯ ಆರ್ಥಿಕ ನೆರವನ್ನು ಬಿಡುಗಡೆಗೊಳಿಸಿ ಮೇಲ್ಕಂಡ ಕೈಗಾರಿಕೆಯ ಪುನರ್ಶ್ಚೇತನಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಲಾಯಿತು.

ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಹೆಮ್ಮೆಯ ಕಾರ್ಖಾನೆ ಉಳಿಸಲು ಸಹಕರಿಸಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷಿ ನಾಯಕಿಯಾದ ರೇಖಾ ರಂಗನಾಥ್, ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೀಶ್, ಆರ್.ಸಿ.ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೆಹೆಕ್ ?ರೀಫ್, ಮುಖಂಡರಾದ ಕೆ.ರಂಗನಾಥ್, ಜಗದೀಶ್ ಇದ್ದರು.
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಶಿವಮೊಗ್ಗ ಶಾಖೆ ವತಿಯಿಂದ ನಗರದ ಮಹಾವೀರ ವೃತ್ತದಿಂದ ಜಿಲ್ಲಾ ಪಂಚಾಯತ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಿಸಿಯೂಟ ನೌಕರರ ೨೦ ವರ್ಷಗಳ ದುಡಿಮೆಯನ್ನು ಲೆಕ್ಕಿಸದೆ 60 ವರ್ಷ ವಯಸ್ಸಾಗಿದೆ ಎಂಬ ಕಾರಣಕ್ಕಾಗಿ 6 ಸಾವಿರ ಜನರನ್ನು ಜೂನ್ 2020ರಲ್ಲಿ ಕೆಲಸದಿಂದ ತೆಗೆಯಲಾಗಿದ್ದು, ಜೂನ್ 2023ರಲ್ಲಿ ಮತ್ತೆ 3 ಸಾವಿರ ಬಿಸಿಯೂಟ ನೌಕರರನ್ನು ತೆಗೆಯುವ ಅಂದಾಜಿದ್ದು, ಆಡಳಿತ ಸುಧಾರಣ ಆಯೋಗ 6500 ಶಾಲೆಗಳನ್ನು ವಿಲೀನಗೊಳಿಸುವುದರಿಂದ 6500 ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆಯುವ ಸೂಚನೆ ಸಿಕ್ಕಿದೆ.

Also read: ಮಹಿಳಾ ಅಧಿಕಾರಿಗಳ ಬೀದಿ ರಂಪ: ಸರ್ಕಾರ ಚಾಟಿ

ನಿವೃತ್ತಿಯಾದವರಿಗೆ ಮತ್ತು ಕೆಲಸದಿಂದ ತೆಗೆಯುವ ನೌಕರರಿಗೆ ಯಾವುದೇ ಪರಿಹಾರ ಕೊಡದೆ ಇರುವ ಸರ್ಕಾರದ ಈ ಪ್ರವೃತ್ತಿ ಸಹಜ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಕೂಡಲೆ ಈಗಾಗಲೇ ಬಿಡುಗಡೆ ಮಾಡಲಾದ ೬ ಸಾವಿರ ಬಿಸಿಯೂಟ ನೌಕರರಿಗೆ ೧ಲಕ್ಷ ರೂ. ಇಡಿಗಂಟು ಇಡಬೇಕು. ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಲೇಬೇಕು. ಬಜೆಟ್‌ನಲ್ಲಿ ಹೆಚ್ಚಳವಾದ ೧ ಸಾವಿರ ರೂ.ಗಳನ್ನು ೨೦೨೩ ಜನವರಿಯಿಂದಲೇ ಜಾರಿಗೊಳಿಸಬೇಕು. ಸಾದಿಲ್ವಾರು ಜಂಟಿ ಖಾತೆಯ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್‌ಡಿಎಂಸಿಗೆ ವರ್ಗಾವಣೆ ಮಾಡಿರುವ ಕ್ರಮ ವಾಪಸ್ಸಾಗಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹನುಮಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿತಾ, ಪ್ರಮುಖರಾದ ಸೂರ್ಯಕಲಾ,ಸುರೇಖಾ, ಜಯಪ್ಪ, ಜಿ.ಪದ್ಮಾವತಿ, ಪುಷ್ಪ ಮೊದಲಾದವರಿದ್ದರು.
ಆಮ್ ಆದ್ಮಿ ಪಾರ್ಟಿ ಜಿಲ್ಲಾಧಿಕಾರಿಗಳಿಗೆ ಮನವಿ
ಕಾನೂನಿನಲ್ಲಿ ಸರ್ಕಾರದ ಯಾವುದೇ ನಿಯಮ, ಆದೇಶಗಳಿಲ್ಲದಿದ್ದರೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರು ವೈದ್ಯಕೀಯ ವೆಚ್ಚವನ್ನು ಪಾಲಿಕೆ ವತಿಯಿಂದ ಪಡೆದುಕೊಂಡಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಫೆ.14. 2020ರಲ್ಲಿ ಪಾಲಿಕೆ ಸಭೆಯಲ್ಲಿ ಕಾರ್ಪೋರೇಟರ್‌ಗಳ ಗೌರವಧನ ಹಾಗೂ ವೈದ್ಯಕೀಯ ವಿಮೆ ಪಾವತಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದ್ದು, ಈ ನಿರ್ಣಯ ರಾಜ್ಯ ಸರ್ಕಾರದ ಯಾವುದೇ ಕಾನೂನಿಗೆ ಹೊರತಾಗಿದೆ ಮತ್ತು ಇದು ಸ್ವಯಂ ನಿರ್ಣಯವಾಗಿದೆ. ಈಗಾಗಲೇ ಪಾಲಿಕೆ ಸದಸ್ಯರು ಹೃದಯ ಶಸ್ತ್ರ ಚಿಕಿತ್ಸೆ, ಮೂಲವ್ಯಾಧಿ ಹಾಗೂ ಕಣ್ಣಿನ ಚಿಕಿತ್ಸೆಗೆ ಲಕ್ಷಾಂತರ ರೂ.ಗಳನ್ನು ಆಸ್ಪತ್ರೆಗಳ ಖರ್ಚಿಗಾಗಿ ಪಡೆದಿದ್ದು, ಇದು ನಿಯಮಬಾಹಿರವಾಗಿದೆ. ಆಡಿಟ್ ಆಕ್ಷೇಪಣೆ ಬಂದರೆ ವೆಚ್ಚ ಮರಳಿ ಕಟ್ಟಲು ಸದಸ್ಯರು ತೀರ್ಮಾನ ಮಾಡಿದ್ದಾರೆ ಎಂದು ಕೂಡ ಕೆಲವು ಪತ್ರಿಕೆಗಳಲ್ಲಿ ಬಹಿರಂಗಗೊಂಡಿದೆ. ಹೀಗಾಗಿ ಶಿವಮೊಗ್ಗ ಜಿಲ್ಲಾ ಆಮ್ ಆದ್ಮಿ ಪಾರ್ಟಿ ಮಾಹಿತಿ ಹಕ್ಕಿನ ಅಡಿಯಲ್ಲಿ ಮಾಹಿತಿಯನ್ನು ಪಡೆದು ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿದೆ.

ಸಾರ್ವಜನಿಕರ ಕಂದಾಯದ ಹಣದಲ್ಲಿ ಕಾನೂನು ಬಾಹಿರವಾಗಿ ಪಾಲಿಕೆಯ ಸರ್ವಪಕ್ಷಗಳ ಸದಸ್ಯರು ಪಕ್ಷಭೇದ ಮರೆತು ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸ್ಪಷ್ಟವಾಗಿದ್ದು, ಆಯುಕ್ತರು ಕೂಡ ಇವರ ಜೊತೆಗೆ ಶಾಮೀಲಾಗಿದ್ದಾರೆ. ಕೂಡಲೆ ಜಿಲ್ಲಾಧಿಕಾರಿಗಳು ಈ ಪ್ರಕರಣದ ಬಗ್ಗೆ ಕ್ರಮಕೈಗೊಳ್ಳದಿದ್ದರೆ ಜಿಲ್ಲೆಯ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಹೋರಾಟಗಾರರ ಜೊತೆಗೆ ಪಾಲಿಕೆ ಮುಂದೆ ಉಗ್ರ ಹೋರಾಟ ಆರಂಭಿಸಲಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿಯ ಮುಖಂಡರಾದ ಮನೋಹರ್‌ಗೌಡ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐಪಿಎಸ್ ರೂಪಾ, ಐಎಎಸ್ ರೋಹಿಣಿ ಜೊತೆ ಮನೀಷ್ ಮೋದ್ಗಿಲ್ ಸಹ ಎತ್ತಂಗಡಿ

Next Post

ಫೆ.23ರಂದು ಕುವೆಂಪು ವಿವಿಯಲ್ಲಿ ಡಿಜಿಟಲ್ ಪತ್ರಿಕೋದ್ಯಮ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

kalpa News

kalpa News

Next Post
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಫೆ.23ರಂದು ಕುವೆಂಪು ವಿವಿಯಲ್ಲಿ ಡಿಜಿಟಲ್ ಪತ್ರಿಕೋದ್ಯಮ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL