ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಹಬ್‌ಆಗಿ ಪರಿವರ್ತನೆಗೊಳ್ಳುತ್ತಿದ್ದರೂ ಕೆಎಸ್‌ಆರ್‌ಟಿಸಿಯಿಂದ ಗ್ರಾಮೀಣ ಭಾಗದಲ್ಲಿ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಖಂಡಿಸಿ ಇಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಶಿವಮೊಗ್ಗ ಗ್ರಾಮಾಂತರ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗದಿಂದ ನೂರಾರು ವಿದ್ಯಾರ್ಥಿಗಳು ಶಂಕರಘಟ್ಟದ ಕುವೆಂಪು ವಿವಿಗೆ ಹೋಗುತ್ತಾರೆ. ಅದರೆ, ಇಲ್ಲಿಗೆ ಕೇವಲ ಒಂದು ಬಸ್ ವ್ಯವಸ್ಥೆ ಮಾತ್ರ ಇದೆ. ಶಿವಮೊಗ್ಗದ ಸುತ್ತಮುತ್ತಲು ಹಲವಾರು ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ದುಬಾರಿ ಪ್ರಯಾಣ ದರ ಭರಿಸಬೇಕಾಗುತ್ತಿದೆ. ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆಂದೇ ರೂಪಿಸಿರುವ ಬಸ್‌ಪಾಸ್ ಸೌಲಭ್ಯ ಪಡೆದುಕೊಳ್ಳಲು ಅಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಕೂಡಲೇ ಕೆಎಸ್‌ಆರ್‌ಟಿಸಿ ವತಿಯಿಂದ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ ಬಸ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿ ನಿಲಯಗಳು, ಶಾಲಾ ಕಾಲೇಜುಗಳ ಬಳಿ ಬಸ್‌ಗಳ ನಿಲುಗಡೆಗೊಳಿಸಲು ಸೂಕ್ತ ಆದೇಶ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಧ್ಯಕ್ಷ ರವಿಕಾಟಿಕೆರೆ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಚರಣ್, ವಿಕ್ರಂ, ರವಿ, ಅಜಯ್ ಅರಸ್,ವರುಣ್ ವಿ ಪಂಡಿತ್, ಕುಮಾರ್, ಅಶ್ವಥ್ ,ತೌಫಿಕ್, ಮಲಗೊಪ್ಪ ಶಿವು, ಗಿರಿ, ಮುರುಳಿ, ರೋಹನ್, ಕಿರಣ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.










Discussion about this post