ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಹೇಳಿದರು.
ತಾಲ್ಲೂಕಿನ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ ಗೀತಾ ಶಿವರಾಜಕುಮಾರ ಪರ ಆಯೋಜಿಸಿದ್ದ ರೋಡ್ ಷೋನಲ್ಲಿ ಪಾಲ್ಗೊಂಡು ಮಾತನಾಡಿದರು.

Also read: ನೇಮಕಗೊಂಡ ಕಂಪನಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ: ಎಸ್.ವೈ ಉಮಾದೇವಿ
ಕ್ಷೇತ್ರದ ಸಮಸ್ಯೆಗಳು ಗಮನದಲ್ಲಿವೆ. ಇಲ್ಲಿ, ಬಗರ್ ಹುಕುಂ, ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳು ಜೀವಂತವಾಗಿವೆ. ಆ ಎಲ್ಲಾ ಸಮಸ್ಯೆಗಳಿಗೆ ಪ್ರಮಾಣಿಕವಾಗಿ ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಆದ್ದರಿಂದ, ಇಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ನಟ ದುನಿಯಾ ವಿಜಯ್ #Duniya Vijay ಮಾತನಾಡಿ, ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದರೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವದಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಆದ್ದರಿಂದ, ಕ್ಷೇತ್ರದ ರಕ್ಷಣೆಗೆ ಗೀತಾಕ್ಕಗೆ ಮತ ನೀಡಿ ಆಶೀರ್ವದಿಸಿ ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ-ಧರ್ಮ-ವರ್ಗ ನೋಡದೆ ಜಾರಿಗೊಳಿಸಿದ್ದೇವೆ. ಈ ಯೋಜನೆಗಳು ಅರ್ಹ ಫಲಾನುಭವಿಗಳ ಕೈಸೇರಿವೆ. ಆದ್ದರಿಂದ, ಈ ಋಣ ತೀರಿಸಲು ಗೀತಕ್ಕಗೆ ಮತ ನೀಡಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post