ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರವು ಕೂಡ ಅತ್ಯಗತ್ಯವಾಗಿದ್ದು ಅಮೂಲ್ಯವಾದ ಬದುಕನ್ನು ಕೋವಿಡ್ ಕಮರದಿರಲಿ ಎಂದು ಪ್ರಿಯದರ್ಶಿನಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಗುರುರಾಜ್ ಹೇಳಿದರು.
ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹೆಲ್ಪ ಡೆಸ್ಕ್ ವತಿಯಿಂದ ಇಂದು ಪ್ರಿಯದರ್ಶಿನಿ ಬಡಾವಣೆಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಕೊರೊನಾದಿಂದ ತೊಂದರೆಗೆ ಒಳಗಾದ ಕುಟುಂಬಗಳಿಗೆ ಏರ್ಪಡಿಸಿದ್ದ ಆಹಾರ ಪದಾರ್ಥಗಳ ಹಾಗೂ ಆರೋಗ್ಯ ಕಿಟ್ ವಿತರಿಸಿ ಮಾತನಾಡಿದರು.
ಕೋವಿಡ್ ಮಹಾಮಾರಿಯಿಂದ ನೊಂದವರಿಗೆ ಸಹಾಯ ಹಸ್ತಗಳ ಅವಶ್ಯಕತೆಯಿದೆ. ಈ ಹಿನ್ನಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವುದು ಸಮಾಧಾನಕರ ವಿಷಯವಾಗಿದೆ ಎಂದು ಹೇಳಿದರು.
ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷರಾದ ಭಾರತಿ ರಾಮಕೃಷ್ಣ ಮಾತನಾಡಿ, ಕೊರೋನಾದಿಂದ ಬಳಲುತ್ತಿರುವ ಮಹಿಳೆಯರು ಮಾನಸಿಕ ದುರ್ಬಲಾಗುವುದು ಬೇಡ, ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಂತಹ ಸಂಸ್ಥೆಗಳಲ್ಲಿ ಲಭ್ಯವಿರುವ ಅಗತ್ಯ ತಜ್ಞ ವೈದ್ಯರ ಆಪ್ತ ಸಲಹೆಯೊಂದಿಗೆ ಆರೋಗ್ಯವಂತರಾಗಿ ಬದುಕಿ ಎಂದು ಹೇಳಿದರು.
ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಸಂಚಾಲಕರಾದ ಕೆ.ಸಿ.ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಇಂದೂಧರ್, ಅಭಿರುಚಿ ಸಂಸ್ಥೆಯ ಕುಮಾರ್ ಶಾಸ್ತ್ರಿ, ಪ್ರಿಯದರ್ಶಿನಿ ಬಡಾವಣೆಯ ನಿವಾಸಿಗಳ ಸಂಘದ ಪ್ರಮುಖರಾದ ಕೆ.ಪಿ. ಶೆಟ್ಟಿ, ಇತಿಹಾಸ ತಜ್ಞರಾದ ಡಾ. ಸಾಮಗ್ , ಯೂತ್ ಹಾಸ್ಟೆಲ್ ಅಸೋಸಿಯೇಷನ್ ಅಧ್ಯಕ್ಷರಾದ ವಾಗೀಶ, ನಾಡಿಗ್, ಶಿವಗಂಗಾ ಯೋಗಾ ಕೇಂದ್ರದ ಲವ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post