ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪುನೀತ್ ರಾಜಕುಮಾರ್ ಒಬ್ಬರು ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿತ್ವದ, ಎಲ್ಲರೊಡನೆ ಯಾವ ಹಮ್ಮು ಬಿಮ್ಮುಗಳಿಲ್ಲದೆ ಬೆರೆಯುವ ವ್ಯಕ್ತಿ. ಅವರು ಸಿನಿಮಾ ರಂಗವನ್ನ ಕೇವಲ ಮನೋರಂಜನೆಗೆ ಸೀಮಿತವಾಗಿಡದೆ ಪ್ರೇಕ್ಷಕರಿಗೆ ಒಂದು ಒಳ್ಳೆಯ ಸಂದೇಶವನ್ನು ಕೊಡುವಂತಹ ಸಿನಿಮಾಗಳನ್ನೇ ಅವರು ಅರಿಸಿಕೊಂಡು ಉತ್ತಮ ಸಮಾಜ ನಿರ್ಮಾಣದ ಕಾಳಜಿ ಹೊಂದಿದ್ದ ನಟರಾಗಿದ್ದರು ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗರಿಗೆ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷ ಎಸ್. ದತ್ತಾತ್ರಿ ಅಭಿಪ್ರಾಯಪಟ್ಟಿದ್ದಾರೆ.
ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಸೊರಬ ತಾಲೂಕಿನ ಭಾರತೀಯ ಜನತಾ ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ತೆರಳಿ ಅಕಾಲಿಕವಾಗಿ ದೈವಾದಿನರಾದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜಕುಮಾರ್ ರವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪುನೀತ್ ಅವರು ಯಾವ ವಿದೇಶಿ ಕಂಪನಿಗಳ ಜಾಹಿರಾತುಗಳಿಗೆ ಬರದೇ, ಕೇವಲ ಸ್ವದೇಶಿ ಕಂಪನಿಗಳ ಜಾಹಿರಾತಿಗೆ ಮಾತ್ರ ಬ್ರಾಂಡ್ ಅಂಬಾಸಿಡರ್ ಆಗಿ ಕಾಣಿಸಿಕೊಳ್ಳುತ್ತಿದ್ದುದು ಹಾಗೂ ಸರ್ಕಾರಿ ಜಾಹೀರಾತುಗಳಿಗೆ ಯಾವುದೇ ಶುಲ್ಕ ಪಡೆಯದೇ ಭಾಗವಹಿಸುತ್ತಿದ್ದುದು ಅವರ ಸ್ವದೇಶ ಪ್ರೇಮಕ್ಕೆ ಹಿಡಿದ ಕೈಗನ್ನದಿಯಾಗಿತ್ತು ಎಂದಿದ್ದಾರೆ.
ಅವರು ಭಾರತೀಯ ಚಿತ್ರನಟನಾಗಿ, ಹಿನ್ನೆಲೆ ಗಾಯಕನಾಗಿ, ಉತ್ತಮ ನೃತ್ಯಗಾರನಾಗಿ, ಉತ್ತಮ ಫೈಟರ್ ಆಗಿ ಮತ್ತು ದೂರದರ್ಶನ ನಿರೂಪಕನಾಗಿ ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರು 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಹಾಗೂ ಬಾಲ್ಯ ನಟನಾದಾಗಲೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದ ಇಂತ ಪ್ರತಿಭಾನ್ವಿತ ನಟನನ್ನು ಕರುನಾಡಿನ ಜನತೆಯ ಕಳೆದುಕೊಂಡಿರುವುದು ಅತ್ಯಂತ ವಿಷಾದನೀಯ ಎಂದು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಅನೇಕ ಸಮಾಜ ಸೇವೆಗಳನ್ನು ಮಾಡಿದ್ದರು. ಆನಾಥಶ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ, ಹಿರಿಯ ನಾಗರೀಕರಿಗೆ ಸಹಾಯ, ಬಡಮಕ್ಕಳಿಗೆ ಆರ್ಥಿಕ ನೆರವು, ದತ್ತು ಮಕ್ಕಳನ್ನು ಪಡೆದಿದ್ದು, ಸಂಘ ಸಂಸ್ಥೆಗಳಿಗೆ ಹಣಕಾಸಿನ ನೆರವು ಸೇರಿದಂತೆ ಹತ್ತು ಹಲವು ಸೇವೆಗಳನ್ನು ಮಾಡಿದ್ದಾರೆ ಎಂದಿದ್ದಾರೆ.
ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ರಾಜಕುಮಾರ್ ರವರ ಇಂತಹ ಒಳ್ಳೆಯ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳು ನಮ್ಮ ಮುಂದಿನ ಪೀಳಿಗೆಗೆ ಮಾದರಿ…. ಭಗವಂತ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಿ ಸದ್ಗತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post