ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಕ್ರಮ ಗೋ ಸಾಗಣೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಹೊಸ ಗೋ ಕಾಯ್ದೆ ಪ್ರಕಾರ ಮಲೆನಾಡಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಜರುಗಿಸಬೇಕೆಂದು ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ನೀಡಿರುವ ಅವರು, ಅಕ್ರಮ ಗೋ ಸಾಗಾಣೆ ಮಾಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಯಾರೇ ಈ ಪ್ರಕರಣದಲ್ಲಿ ಭಾಗಿಯಾದರೂ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ದಲಿ, ಹಿಂದೂ ಸಮಾಜದ ಯುವಕರು ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ:
ನಿನ್ನೆ ತೀರ್ಥಹಳ್ಳಿಯ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಭಜರಂಗ ದಳದ ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಕಿರಣ್ (23), ಚರಣ್ (24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post