ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರ್. ಕಿರಣ್ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರ ಹಾಗೂ ರಾಜ್ಯ ಮುಖಂಡರುಗಳಾದ ಕೃಷ್ಣ ಅಲ್ವರ್, ಬಿ.ವಿ ಶ್ರೀನಿವಾಸ್, ಬಂಟಿ ಶಲ್ಕೆ, ಮಾಹಿನ್ ಖಾನ್, ತೇಜಸ್ವಿ ಮಂಜೆಕರ್ ಅವರ ನಿರ್ದೇಶನದಂತೆ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸಲ್ ನಲಪಾಡ್ ಅವರು ಜಿಲ್ಲೆಯ ಯುವ ನಾಯಕ ಆರ್. ಕಿರಣ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.
ನೂತನವಾಗಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾದ ಆರ್.ಕಿರಣ್ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿ ತಮಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುತ್ತೇನೆ. ಯುವ ಸಂಘಟನೆಯನ್ನು ಮತ್ತುಷ್ಟು ಬಲಗೊಳಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಶ್ರಮಿಸುವೆ ಎಂದು. ಕಿರಣ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ ಯುವ ಸಮಿತಿ ಅಭಿನಂದಿಸಿದೆ.
Also read: ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post