ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾದ್ಯಾಪಕ ಆರ್.ಜೆ. ರಾಘವೇಂದ್ರ ಅವರು ಮಂಡಿಸಿದ ‘ಅಪ್ರೋಚಸ್ ಫಾರ್ ಎನ್‌ಶುರಿಂಗ್ ಸೆಕ್ಯುರಿಟಿ ಇನ್ ಫೇಸ್ ಐಡೆಂಟಿಫಿಕೇಷನ್ ಸಿಸ್ಟಮ್ ಎಗೆನಿಸ್ಟ್ ಸ್ಪೂಫಿಂಗ್ ಅಟ್ಯಾಕ್ಸ್’ ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿದೆ.
ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಆರ್. ಸಂಜೀವ್ ಕುಂಟೆ ಮಾರ್ಗದರ್ಶನ ನೀಡಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post