ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಘುಪತಿ ಭಟ್ #Raghupathi Bhat ಅವರ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ #Dr. Dhananjaya Sarji ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಅವರು ಅತ್ಯಧಿಕ ಮತಗಳ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ #B S Yadiyurappa ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಘುಪತಿ ಭಟ್ ಮೂರು ಬಾರಿ ಶಾಸಕರಾಗಿದ್ದಾರೆ. ಪಕ್ಷ ಅವರಿಗೆ ಎಲ್ಲಾ ಸ್ಥಾನಮಾನ ನೀಡಿದೆ. ಆದರೂ ಅವರು ಹಠದಿಂದ ನಿಂತಿದ್ದಾರೆ. ಅನೇಕ ಹಿರಿಯರು ಅವರ ಮನವೊಲಿಸುವ ಪ್ರಯತ್ನ ಮಾಡಿದರೂ ಅವರು ಕಣದಿಂದ ಹಿಂದೆ ಸರಿದಿಲ್ಲ. ಆದರೂ ಡಾ. ಸರ್ಜಿ ಮೇಲೆ ಪದವೀಧರ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿದ್ದು ಅವರ ಗೆಲುವು ಖಚಿತ ಎಂದರು.
Also read: ದೇಶಕ್ಕೆ ಬರುವ 2 ದಿನ ಮೊದಲೇ ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನ ಗೆಲ್ಲುವುದು ಖಚಿತ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post