ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೂ ಸಮಾಜದ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ರಾಹುಲ್ ಗಾಂಧಿ #K S Eshwarappa ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ನೇರವಾಗಿ ಹಿಂದೂ ಸಮಾಜ ಟೀಕೆ ಮಾಡುವ ಧೈರ್ಯ ಯಾರು ಮಾಡಿರಲಿಲ್ಲ. ಮುಸಲ್ಮಾನರ ಬೆಂಬಲದಿಂದ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅಂದುಕೊಂಡಿದ್ದರು.ಈಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ #Rahul Gandhi ಮಾಡುತ್ತಿದ್ದಾರೆ ಎಂದು ಹೇಳಿದರು.

Also read: ಶಿವಮೊಗ್ಗ | ಇಲ್ಲಿಗೆ ಬರೋ ಧೈರ್ಯ ಮಾಡೋಕೆ ಕಷ್ಟ ಆಯ್ತು | ನಟ ಶಿವರಾಜಕುಮಾರ್ ಭಾವುಕ ಮಾತು
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಗೌರವ ಬರುವ ರೀತಿ ನಡೆದುಕೊಳ್ಳಬೇಕು. ಇಲ್ಲದಿದ್ದರೇ ಇಡೀ ಹಿಂದೂ ಸಮಾಜ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದೆ ಎಂದರುಉ.

ಮೂಡಾ ಹಗರಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಮೂಡಾ ಹಗರಣದಲ್ಲಿ ಸಿಎಂ ಸಿಕ್ಕಿ ಬಿದ್ದಿದ್ದಾರೆ. ಅವರ ಮನೆಯಲ್ಲಿ ಇರುವ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ.ನ್ಯಾಯಾಧೀಶರ ಕೈಗೆ ಪ್ರಕರಣವನ್ನು ಕೊಟ್ಟು ತನಿಖೆ ಮಾಡಿಸಲಿ. ಸಿಎಂ ಕುಟುಂಬದವರು ಭಾಗಿಯಾಗಿದ್ದಾರೆ. ಸಿಎಂ ಕೂಡಲೇ ರಾಜೀನಾಮೆ ನೀಡಿ ಈ ಪ್ರಕರಣದ ತನಿಖೆಗೆ ಸಿಬಿಐಗೆ ವಹಿಸಬೇಕು. ತನಿಖೆ ಮುಗಿದ ನಂತರ ಮತ್ತೆ ಬೇಕಾದರೆ ಸಿಎಂ ಆಗಲಿ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post