ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ #Rahul Gandhi ನಗರದ ಫ್ರೀಡಂ ಪಾರ್ಕ್‍ನಲ್ಲಿ ಗೀತಾ ಶಿವರಾಜ್‍ಕುಮಾರ್ #Geetha Shivarajkumar ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ #Madhu Bangarappa ಹೇಳಿದ್ದಾರೆ.
ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹಿಂದೆಂದೂ ಕಾಣದ ರೀತಿಯಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ ವರ್ಗದ ಜನ ಅಭಿನಂದಿಸುತ್ತಿದ್ದಾರೆ. ಮತ ಕೇಳಲು ಮನೆಗೆ ಹೋದರಿಗೆ ಮನೆ ಒಳಗೆ ಕರೆದು ಚಹಾ, ನೀರು, ನೀಡುತ್ತಿದ್ದಾರೆ. ಇವರ ಪ್ರೀತಿಗೆ ಹೃದಯ ತುಂಬಿ ಬರುತ್ತಿದೆ ಎಂದರು.
ಈಗಾಗಲೇ ಗ್ಯಾರಂಟಿ ಕಾರ್ಡ್‍ಗಳ ವಿತರಣೆ ಕಾರ್ಯ ಮುಗಿದಿದೆ. 3ನೇ ಹಂತದ ಪ್ರಚಾರಕ್ಕೆ ಕಾಲಿಟ್ಟಿದ್ದೇವೆ. ಬಿಜೆಪಿ ಪ್ರಚಾರಕ್ಕೆ ಹೋಲಿಸಿದರೆ ನಮ್ಮ ಪ್ರಚಾರವೇ ಜಾಸ್ತಿ ಇದೆ. ಮೇ 2ರಂದು ಮಧ್ಯಾಹ್ನ 12 ರಿಂದ 1.30ರವರೆಗೆ ರಾಹುಲ್ ಗಾಂಧಿಯವರು ಸಮಯ ನೀಡಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಲಿದ್ದಾರೆ ಎಂದರು.
Also read: ಗೀತಾಕ್ಕ ಹೆಣ್ಣು ಮಗಳಾದರೂ ಅವರು ತಂದೆ ಬಂಗಾರಪ್ಪ ತದ್ರೂಪಿ: ಮಧು ಬಂಗಾರಪ್ಪ
ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ ಮತ್ತು ಶಿವಮೊಗ್ಗ ನಗರ ನಾಲ್ಕು ತಾಲ್ಲೂಕುಗಳ ಮತದಾರರು ಆಗಮಿಸಲಿದ್ದಾರೆ. ಅಲ್ಲದೆ ಫಿಲಂ ಛೇಂಬರ್‍ನವರು ಕೂಡ ಇದೇ ಮೊದಲ ಬಾರಿಗೆ ಗೀತಾಶಿವರಾಜ್‍ಕುಮಾರ್‍ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ 8 ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್‍ಶೋ ಮೂಲಕ ಗೀತಕ್ಕನ ಪರ ವ್ಯಾಪಕ ಪ್ರಚಾರ ಮಾಡಲಿದ್ದಾರೆ. ನಾವು ಅವರಿಗೆ ಒತ್ತಾಯಿಸಿಲ್ಲ. ಅವರೇ ಸ್ವಯಂ ಪ್ರೇರಿತರಾಗಿ ಬರುತ್ತಿದ್ದು, ಇನ್ನೂ ಅನೇಕ ಚಿತ್ರರಂಗದ ಪ್ರಮುಖರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನಟ ದುನಿಯಾ ವಿಜಿ, ಡಾಲಿ ಧಜಂಜಯ್, ಸತ್ಯ, ಚಿಕ್ಕಣ್ಣ, ವಿಜಯರಾಘವೇಂದ್ರ, ನೆನಪಿರಲಿ ಪ್ರೇಮ್, ನಿಸ್ವಿಕಾನಾಯ್ಡು, ಚಂದನಶೆಟ್ಟಿ, ಅನುಶ್ರೀ, ಅಕುಲ್‍ಬಾಲಾಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.
ಧರ್ಮದ ಹೆಸರಿನಲ್ಲಿ ಜನರನ್ನು ಉದ್ವೇಗಕ್ಕೆ ಒಳಗಾಗಿಸಿ ಹೊಟ್ಟೆಗೆ ಕನೆಕ್ಷನ್ ಇಲ್ಲದಾಗೆ ಬಿಜೆಪಿಯವರು ಮಾಡಿದ್ದರು. ಆದರೆ ಮತದಾರ ಈಗ ಧರ್ಮಕ್ಕಿಂತ ಹೊಟ್ಟೆಪಾಡೆ ಮೇಲೆ ಎಂದು ಅರಿತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಅತ್ಯಂತ ದೊಡ್ಡ ಅಂತರದಲ್ಲಿ ಗೀತಾಶಿವರಾಜ್‍ಕುಮಾರ್ ಗೆಲ್ಲುತ್ತಾರೆ. ಮೋದಿ ಸರ್ಕಾರದ ಅಭಿವೃದ್ಧಿಯನ್ನು ಮತ್ತು ಸುಳ್ಳನ್ನು 10 ವರ್ಷದಲ್ಲಿ ಜನ ನೋಡಿದ್ದಾರೆ. ಅಣ್ಣಾಮಲೈ ವಿಳಾಸ ಇಲ್ಲದ ವ್ಯಕ್ತಿ, ತಮಿಳುನಾಡಿಗೆ ಯಾಕೆ ಹೋದರು. ಅವರ ಪ್ರಚಾರ ಯಾವುದೇ ಪರಿಣಾಮ ಬೀರಲ್ಲ ಎಂದರು.
ಸುದ್ಧಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ.ಮಂಜುನಾಥ್, ಪ್ರಮುಖರಾದ ಸುವರ್ಣ ನಾಗರಾಜ್, ಚಿನ್ನಪ್ಪ, ಶಮಂತ್, ಜಿತೇಂದ್ರ ಸೇರಿದಂತೆ ಹಲವರಿದ್ದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ನಗರ ಮಂಡಲ ನಗರದ ಕುಂಬಾರ ಗುಂಡಿಯಲ್ಲಿ ಆಯೋಜಿಸಿದ್ದ “ಸಾರ್ವಜನಿಕ ಸಭೆ” ಯಲ್ಲಿ ಪಾಲ್ಗೊಂಡು ಮತದಾರರನ್ನು ಭೇಟಿ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಅಭೂತಪೂರ್ವ ಗೆಲುವಿಗೆ ಸಹಕರಿಸುವಂತೆ ಮತಯಾಚನೆ ಮಾಡಲಾಯಿತು.
ನಂತರ ಸಿನಿಮಾ ರಸ್ತೆಯಲ್ಲಿರುವ ಬಟ್ಟೆ ಮಾರುಕಟ್ಟೆಗೆ ತೆರಳಿ ಅಲ್ಲಿರುವ ವ್ಯಾಪಾರಿಗಳನ್ನು ಹಾಗೂ ಖರೀದಿದಾರರನ್ನು ಸಂಪರ್ಕಿಸಿ ಮತ ಕೇಳಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಮೋಹನ್ ರೆಡ್ಡಿ, ಭಾನುಮತಿ, ರಮೇಶ್, ವಿನೋದ್ ಕುಮಾರ್, ದೀನದಯಾಳು, ಮಾಲತೇಶ್, ಸೋಮೇಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post