ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಹೊಸಮನೆ ಬಡಾವಣೆಯ ಚಾನಲ್ ಬಲಭಾಗ ನಾಗಪ್ಪ ದೇವಸ್ಥಾನದ ಎದುರಿನ ಪಾರ್ಕ್ ಮುಂಭಾಗ ಗಿಡ ನೆಡುವ ಮೂಲಕ ಆಚರಿಸಲಾಯಿತು
ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ರಾಹುಲ್ ಗಾಂಧಿಯವರು ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ದೇಶಕ್ಕೆ ಆಪತ್ಬಾಂಧವರಾಗಿ ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜನರ ಸೇವೆಗೆ ಮುಂದಾಗಿ ಸೇವಾಮನೋಭಾವದಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು. ಅದರಂತೆ ಇಡೀ ದೇಶಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಜನಸೇವೆಯ ಕಾರ್ಯಗಳನ್ನು ಮಾಡುತ್ತಿದ್ದು. ಇಂದು ರಾಹುಲ್ ಗಾಂಧಿಯ ಜನ್ಮದಿನದ ಪ್ರಯುಕ್ತ ಸಾಮಾಜಿಕ ಕಳಕಳಿಯೊಂದಿಗೆ ಪರಿಸರ ಆಸಕ್ತಿವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್ ಮಾತನಾಡಿ, ರಾಹುಲ್ ಗಾಂಧಿಯವರ ಜನ್ಮ ದಿನದ ಪ್ರಯುಕ್ತ ಜಿಲ್ಲಾದ್ಯಂತ ಎಲ್ಲಾ ತಾಲೂಕು ಹೋಬಳಿ ಪಂಚಾಯ್ತಿ ಮಟ್ಟದಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪದಾಧಿಕಾರಿಗಳು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು ಸತತವಾಗಿ ಹಸಿದವರಿಗೆ ಅನ್ನ ಕಾರ್ಯಕ್ರಮ, ಮೆಡಿಸನ್ಸ್ ಕಿಟ್, ಪಡಿತರ ಕಿಟ್, ರಕ್ತದ ಅವಶ್ಯಕತೆ ಇರುವವರಿಗೆ ರಕ್ತದಾನ , ಜೊತೆಗೆ ಪರಿಸರ ಆಸಕ್ತಿಯೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಾಗೆಯೇ ಇನ್ನು ಹಲವು ಜನಪರ ಕಾರ್ಯಕ್ರಮಗಳು ರಾಹುಲ್ ಜಿ ರವರ ಆಶಯದಂತೆ ನಡೆಯುತ್ತಿದ್ದು ಯುವಕರು ರಾಜಕೀಯದೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post