No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಟೋ ಚಾಲಕರಿಗೆ ಸಂಚಾರ ಪೊಲೀಸರ ಶಾಕ್‌: ಪ್ರೀ-ಪೇಯ್ಡ್ ದರ ಮೀರಿ ಹಣ ಪಡೆದರೆ ಕೇಸ್!

ಬೆಳಗಿನ ಜಾವ ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ದಾಳಿ

kalpa News by kalpa News
September 30, 2026
in ಶಿವಮೊಗ್ಗ
0
Shivamogga Railway Station Prepaid Auto Traffic Police Raid
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈಲ್ವೆ ನಿಲ್ದಾಣದಿಂದ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಲ್ಪಿಸಿರುವ (Prepaid Auto) ಪ್ರೀ-ಪೇಯ್ಡ್ ಆಟೋ ಸೌಲಭ್ಯವಿದ್ದರೂ, ಕೆಲವು ಆಟೋ ಚಾಲಕರು ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ (Shivamogga) ಶಿವಮೊಗ್ಗ ಸಂಚಾರ ಪೊಲೀಸರು ಬುಧವಾರ ಬೆಳಗಿನ ಜಾವ ದಿಢೀರ್ ಕಾರ್ಯಾಚರಣೆ ನಡೆಸಿದರು.

ಸಂಚಾರ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಬೆಳಗಿನ ಜಾವ ಸುಮಾರು 4.30ಕ್ಕೆ ಶಿವಮೊಗ್ಗ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿದ್ದ ಆಟೋಗಳನ್ನು ಪರಿಶೀಲಿಸಿದರು. ಪ್ರೀ-ಪೇಯ್ಡ್ ಕೌಂಟರ್‌ನಿಂದ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಂದ ಟಿಕೆಟ್‌ನಲ್ಲಿ ನಮೂದಿಸಿರುವ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆಯುತ್ತಿರುವ ಬಗ್ಗೆ ಪೊಲೀಸರು ಚಾಲಕರಿಗೆ ಎಚ್ಚರಿಕೆ ನೀಡಿದರು.

ರೈಲ್ವೆ ನಿಲ್ದಾಣದಲ್ಲಿ ಪ್ರೀ-ಪೇಯ್ಡ್ ಆಟೋ ವ್ಯವಸ್ಥೆ ಇದ್ದರೂ ಕೆಲವು ಚಾಲಕರು ಪ್ರಯಾಣಿಕರಿಗೆ ಹೆಚ್ಚುವರಿ ಹಣ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳು ಪೊಲೀಸರಿಗೆ ಬಂದಿದ್ದವು. ಅದರಂತೆ ಸ್ಥಳಕ್ಕೆ ತೆರಳಿದ ಪೊಲೀಸರು ಆಟೋ ಚಾಲಕರಿಗೆ ನಿಯಮಗಳ ಕುರಿತು ಸ್ಪಷ್ಟ ಸೂಚನೆ ನೀಡಿದರು. ಪ್ರಯಾಣಿಕರು ಪ್ರೀ-ಪೇಯ್ಡ್ ಕೌಂಟರ್‌ನಲ್ಲಿ ಟಿಕೆಟ್ ಪಡೆದು, ಅದರಲ್ಲಿ ನಿಗದಿಪಡಿಸಿರುವ ದರದಲ್ಲಿಯೇ ಪ್ರಯಾಣಿಸಬೇಕು ಎಂದು ತಿಳಿಸಿದರು.dk shivakumar led karnataka government 100 days celebration

20 ನಿಮಿಷದಲ್ಲಿ 115 ಪ್ರಯಾಣಿಕರಿಂದ ಪ್ರೀ-ಪೇಯ್ಡ್ ಸೇವೆ

ಪೊಲೀಸರ ಜಾಗೃತಿ ಕಾರ್ಯಾಚರಣೆಯ ಪರಿಣಾಮ ರೈಲ್ವೆ ನಿಲ್ದಾಣದಲ್ಲಿ ಕೆಲವೇ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಪ್ರೀ-ಪೇಯ್ಡ್ ಆಟೋ ಸೇವೆಯನ್ನು ಬಳಸಿಕೊಂಡರು. ಸುಮಾರು 20 ನಿಮಿಷಗಳ ಅವಧಿಯಲ್ಲಿ 115 ಪ್ರಯಾಣಿಕರು ಪ್ರೀ-ಪೇಯ್ಡ್ ಆಟೋ ಸೌಲಭ್ಯ ಪಡೆದುಕೊಂಡರು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Also Read>> MRPLನಲ್ಲಿ ಭಾರೀ ಸ್ಫೋಟದ ಸದ್ದು! ಜೋಕಟ್ಟೆ–ಸುರತ್ಕಲ್‌ವರೆಗೆ ಕಂಪನ | ಮನೆಗಳ ಗೋಡೆಗೆ ಬಿರುಕು

ಬೆಂಗಳೂರು–ತಾಳಗುಪ್ಪ ರೈಲಿನಲ್ಲಿ ಆಗಮಿಸಿದ ಪ್ರಯಾಣಿಕರ ಪೈಕಿ ಒಟ್ಟು 112 ಮಂದಿ ಪ್ರೀ-ಪೇಯ್ಡ್ ಆಟೋ ಟಿಕೆಟ್ ಪಡೆದು ಪ್ರಯಾಣಿಸಿರುವುದು ಕಾರ್ಯಾಚರಣೆ ವೇಳೆ ಗಮನಕ್ಕೆ ಬಂದಿದೆ. ಇದರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರೀ-ಪೇಯ್ಡ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಪ್ರಯಾಣಿಕರಿಗೆ ದರದ ವಿಚಾರದಲ್ಲಿ ಪಾರದರ್ಶಕತೆ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಳಗಿನ ಜಾವ ಹೆಚ್ಚುವರಿ ದರ ವಸೂಲಿಗೂ ಎಚ್ಚರಿಕೆ

ಬೆಳಗಿನ ಜಾವ 5.30ರವರೆಗೆ ಮೀಟರ್ ದರದ ಮೇಲೆ ಒಂದೂವರೆ ಪಟ್ಟು ದರ ಪಡೆಯಲು ಅವಕಾಶವಿದ್ದರೂ, ಕೆಲವು ಆಟೋ ಚಾಲಕರು ಈ ನಿಯಮದ ಹೆಸರಿನಲ್ಲಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರುಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಿಯಮಾನುಸಾರವೇ ಪ್ರಯಾಣಿಕರಿಂದ ದರ ಪಡೆಯಬೇಕು ಎಂದು ಚಾಲಕರಿಗೆ ಸೂಚಿಸಿದರು.Christ King

ನಿಗದಿತ ದರಕ್ಕಿಂತ ಹೆಚ್ಚುವರಿ ಹಣವನ್ನು ಪ್ರಯಾಣಿಕರಿಂದ ಬಲವಂತವಾಗಿ ಪಡೆಯುವುದು ಅಥವಾ ಪ್ರಯಾಣಿಕರಿಗೆ ಅನಗತ್ಯ ತೊಂದರೆ ನೀಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಲಕರಿಗೆ ಎಚ್ಚರಿಕೆ ನೀಡಲಾಯಿತು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೂ ಪ್ರೀ-ಪೇಯ್ಡ್ ವ್ಯವಸ್ಥೆ

ಶಿವಮೊಗ್ಗ ನಗರದ ಕೇಂದ್ರ ರೈಲ್ವೆ ನಿಲ್ದಾಣದ ಜೊತೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲೂ ಪ್ರೀ-ಪೇಯ್ಡ್ ಆಟೋ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ನಿಗದಿತ ದರದಲ್ಲಿ ಪ್ರಯಾಣಿಸಬೇಕು ಎಂದು ಸಿಪಿಐ ದೇವರಾಜ್ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಕೇವಲ ಒಂದು ಗಂಟೆಯ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 168 ಪ್ರಯಾಣಿಕರು ಪ್ರೀ-ಪೇಯ್ಡ್ ಆಟೋ ಸೇವೆ ಬಳಸಿಕೊಂಡಿದ್ದಾರೆ. ರೈಲು ಮತ್ತು ಬಸ್ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರು ಆಟೋ ಹತ್ತುವ ಮುನ್ನ ಪ್ರೀ-ಪೇಯ್ಡ್ ಕೌಂಟರ್‌ನಿಂದ ಟಿಕೆಟ್ ಪಡೆದುಕೊಳ್ಳುವಂತೆ ಪೊಲೀಸರು ಜಾಗೃತಿ ಮೂಡಿಸಿದರು.

Shivamogga : ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆ

ಆಟೋ ಚಾಲಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುವುದು, ಪ್ರೀ-ಪೇಯ್ಡ್ ಟಿಕೆಟ್ ದರವನ್ನು ನಿರಾಕರಿಸುವುದು ಅಥವಾ ನಿಯಮ ಮೀರಿ ವರ್ತಿಸುವುದು ಕಂಡುಬಂದರೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಿಪಿಐ ದೇವರಾಜ್ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.Kalahamsa Infotech private limited

ಪ್ರಯಾಣಿಕರ ಹಿತಾಸಕ್ತಿಯೇ ಪೊಲೀಸರ ಪ್ರಮುಖ ಆದ್ಯತೆಯಾಗಿದ್ದು, ರೈಲು ಹಾಗೂ ಬಸ್ ನಿಲ್ದಾಣಗಳಲ್ಲಿ ಪ್ರೀ-ಪೇಯ್ಡ್ ಆಟೋ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ತಪಾಸಣೆ ಹಾಗೂ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್ ಹೆಚ್.ಎನ್. ಸೇರಿದಂತೆ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪೊಲೀಸರ ದಿಢೀರ್ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಪಾರದರ್ಶಕ ಆಟೋ ಸೇವೆ ದೊರೆಯುವಂತಾಗಲು ಇಂತಹ ತಪಾಸಣೆಗಳನ್ನು ನಿರಂತರವಾಗಿ ನಡೆಸಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಪೊಲೀಸರ ಮನವಿ

ರೈಲು ಅಥವಾ ಬಸ್ ನಿಲ್ದಾಣದಿಂದ ಆಟೋದಲ್ಲಿ ಪ್ರಯಾಣಿಸುವ ಸಾರ್ವಜನಿಕರು ಸಾಧ್ಯವಾದಷ್ಟು ಪ್ರೀ-ಪೇಯ್ಡ್ ಕೌಂಟರ್‌ನಿಂದ ಟಿಕೆಟ್ ಪಡೆದು, ಟಿಕೆಟ್‌ನಲ್ಲಿ ನಮೂದಿಸಿರುವ ನಿಗದಿತ ದರದಲ್ಲಿಯೇ ಪ್ರಯಾಣಿಸಬೇಕು. ಹೆಚ್ಚುವರಿ ಹಣಕ್ಕೆ ಒತ್ತಾಯಿಸಿದರೆ ಸಂಬಂಧಿಸಿದ ಪೊಲೀಸರಿಗೆ ದೂರು ನೀಡುವಂತೆ ಮನವಿ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news PES Shivamogga

Kalpa News Advertising Disclaimer

Tags: Prepaid AutoRailway StationShivamoggaTraffic policeಆಟೋ ಚಾಲಕರುಪ್ರೀ-ಪೇಯ್ಡ್ ಆಟೋರೈಲ್ವೆ ನಿಲ್ದಾಣಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

MRPLನಲ್ಲಿ ಭಾರೀ ಸ್ಫೋಟದ ಸದ್ದು! ಜೋಕಟ್ಟೆ–ಸುರತ್ಕಲ್‌ವರೆಗೆ ಕಂಪನ | ಮನೆಗಳ ಗೋಡೆಗೆ ಬಿರುಕು

Next Post

SIR ವಿರುದ್ಧ INDIA ಒಕ್ಕೂಟದ ಸಮರ: ಅ.2ರಿಂದ ದೇಶಾದ್ಯಂತ ‘Save Democracy’ ಪ್ರತಿಭಟನೆ

kalpa News

kalpa News

Next Post
India Bloc SIR Row Save Democracy Protest Oct 2 EC copy

SIR ವಿರುದ್ಧ INDIA ಒಕ್ಕೂಟದ ಸಮರ: ಅ.2ರಿಂದ ದೇಶಾದ್ಯಂತ ‘Save Democracy’ ಪ್ರತಿಭಟನೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL