ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಮದುವೆ ಛತ್ರಕ್ಕೆ ನೀರು ನುಗ್ಗಿದ ಘಟನೆ ಗುಡ್ಡೆಕಲ್‌ನಲ್ಲಿ ನಡೆದಿದೆ.
ಗುಡ್ಡೆಕಲ್ ದೇವಸ್ಥಾನಕ್ಕೆ ಸೇರಿದ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಊಟದ ಹಾಲ್‌ಗೆ ನೀರು ನುಗ್ಗಿದ ಪರಿಣಾಮ ಮದುವೆಗೆ ಆಗಮಿಸಿದ್ದವರು ಪರದಾಡುವಂತಾಯಿತು.
Also read: ಸಮರ್ಥ, ಸುಸಂಸ್ಕೃತ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಕೆಲವು ಬಡಾವಣೆಗಳಿಗೆ ನೀರು ನುಗ್ಗಿದ್ದು, ಮನೆಗಳಲ್ಲಿ ನಿಂತಿದ್ದ ನೀರನ್ನು ಹೊರಹಾಕಲು ಸ್ಥಳೀಯ ನಿವಾಸಿಗಳು ಹರಸಾಹಸಪಟ್ಟರು.
ಮಳೆಗಾಲದ ಪ್ರಾರಂಭದಲ್ಲಿಯೇ ಜನರು ಕಿರಿಕಿರಿ ಅನುಭವಿಸುವಂತಾಗಿದ್ದು, ಇನ್ನಾದರೂ ಮಹಾನಗರ ಪಾಲಿಕೆ ಎಚ್ಚೆತ್ತು ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಲಿ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















Discussion about this post