No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 16, 2024
in ಶಿವಮೊಗ್ಗ
0
ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

Image curtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದಲ್ಲಿ ನೆನ್ನೆ ರಾತ್ರಿಯಿಡಿ ಭಾರೀ ಮಳೆಯಾಗಿದ್ದು, ಇಂದು ಬೆಳಿಗ್ಗೆನಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮತ್ತೊಂದೆಡೆ, ನಗರದ ಮೂಲಕ ಹಾದು ಹೋಗಿರುವ ತುಂಗಾ #Tunga ನದಿಯು ಮೈದುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರಿಂದ ತುಂಗಾ ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ನಿರಂತರವಾಗಿ ಏರಿಕೆ ಕಂಡುಬರುತ್ತಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ವರ್ಷಧಾರೆ ರಮಣೀಯತೆಯನ್ನು ಪಡೆದುಕೊಂಡಿದ್ದು, ಮಳೆಯ ರಭಸಕ್ಕೆ ತುಂಗಾ ನದಿಯ ಉಪನದಿಗಳೆಲ್ಲಾ ಉಕ್ಕೇರಿವೆ. ಜೊತೆಯಲ್ಲಿ ತುಂಗೆಯು ಸಹ ಕಳೆಗಟ್ಟಿದೆ. ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಸಮೀಪ ಇರುವ ರಾಮಕೊಂಡ ಬಹುತೇಕ ಮುಳುಗಿದೆ.
ಇತ್ತ ಗಾಜನೂರು ಜಲಾಶಯದ #Gajanuru Dam ಎಲ್ಲಾ ಕ್ರಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದ್ದು ಪ್ರಸ್ತುತ ಮಾಹಿತಿ ಪ್ರಕಾರ, 41 ಸಾವಿರ ಕ್ಯೂಸೆಕ್ಸ್ ನೀರು ನದಿಗೆ ಹರಿಯುತ್ತಿದೆ. ಪರಿಣಾಮ ಶಿವಮೊಗ್ಗದಲ್ಲಿ ಹರಿಯುವ ತುಂಗಾ ನದಿಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲದೆ ಶಿವಮೊಗ್ಗದಲ್ಲಿ ಹೊಳೆ ತುಂಬಿತು ಎಂದು ಆನಾದಿ ಕಾಲದಿಂದಲೂ ಲೆಕ್ಕ ಹೇಳುವ ಕೊರ್ಪಳ್ಳಯ್ಯನ ಛತ್ರದ ಬಳಿ ಇರುವ ಮಂಟಪ ಇವತ್ತು ಮುಳುಗಡೆಯಾಗಿದೆ.

ವಿಶೇಷವಾಗಿ ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಟಪ ಮುಳುಗಿದೆ. ಇನ್ನೂ ಮಳೆಯು ಹೆಚ್ಚಾಗಿ ಹರಿಯುವ ನೀರಿನ ಕ್ಯೂಸೆಕ್ಸ್ ಪ್ರಮಾಣ ಹೆಚ್ಚಾದರೆ ವಿದ್ಯಾನಗರದ ಭಾಗದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಲಿದೆ. ಏಕೆಂದರೆ ತುಂಗಾ ನದಿಯ ಈ ಭಾಗದಲ್ಲಿ ಬೃಹತ್ ತಡೆಗೋಡೆ ನಿರ್ಮಿಸಲಾಗಿದೆ. ಹೀಗಾಗಿ ಹರಿಯುವ ನೀರು ಇನ್ನೊಂದು ಭಾಗಕ್ಕೆ ಒತ್ತುವುದರಿಂದ ಆ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಇನ್ನೂ ಇತ್ತಾ ಬೀಬಿ ಸ್ಟ್ರೀಟ್ ಸೀಗೇಹಟ್ಟಿ ಭಾಗದಲ್ಲಿ ರಾಜಕಾಲುವೆ ಇರುವ ಸುತ್ತಮುತ್ತ ನದಿ ನೀರು ಉಕ್ಕುವ ಸಾಧ್ಯತೆ ಇದೆ.
ಇದೆಲ್ಲದರ ನಡುವೆ ಜನರು ತುಂಬಿದ ತುಂಗೆಯ ಶೃಂಗಾರವನ್ನು ನೋಡಲು ನದಿಕಡೆಗೆ ತೆರಳುತ್ತಿದ್ದಾರೆ. ತಮ್ಮ ಮೊಬೈಲ್‌ಗಳಲ್ಲಿ ತುಂಗೆಯ ಸೌಂದರ್ಯವನ್ನು ಸೆರೆಹಿಡಿದು ನಮ್ಮೂರ ತಾಯಿ ಮೈದುಂಬಿ ಹರಿಯುತ್ತಿದ್ದಾಳೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಾಕಿಕೊಳ್ಳುತ್ತಿದ್ದಾರೆ.

Also read: ಶಿವಮೊಗ್ಗ | ನಿಮಗೆ ರೇಡಿಯೋ RJ ಆಗುವ ಕನಸಿದೆಯೇ? ಹಾಗಾದರೆ ಇಲ್ಲಿದೆ ಅವಕಾಶ

ಮತ್ತೊಂದೆಡೆ, ತುಂಗೆಯ ಹರಿವು ಹೆಚ್ಚಾಗಿರುವುದರಿಂದ ನದಿಯಂಚಿನ ತಗ್ಗು ಪ್ರದೇಶಗಳಲ್ಲಿ ಜಲಾವೃತದ ಭೀತಿ ಎದುರಾಗಿದೆ. ಈಗಾಗಲೇ ಪಾಲಿಕೆ ಆಡಳಿತವು ತಗ್ಗು ಪ್ರದೇಶಗಳ ಜನತೆಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹಾಗೆಯೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮಾಡಿಕೊಂಡಿದೆ.

ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾಣಿಯಲ್ಲಿ 240 ಮಿ.ಮೀ. ಯಡೂರು 229 ಮಿ.ಮೀ., ಹುಲಿಕಲ್ಲು 245 ಮಿ.ಮೀ., ಮಾಸ್ತಿಕಟ್ಟೆ 247 ಮಿ.ಮೀ., ಸಾವೇಹಕ್ಲುವಿನಲ್ಲಿ 210 ಮಿ.ಮೀ. ಮಳೆಯಾಗಿದೆ.

ಶಿವಮೊಗ್ಗ 52 ಮಿ.ಮೀ., ಭದ್ರಾವತಿ 26.40 ಮಿ.ಮೀ., ತೀರ್ಥಹಳ್ಳಿ 120.90 ಮಿ.ಮೀ., ಸಾಗರ 129.10 ಮಿ.ಮೀ., ಶಿಕಾರಿಪುರ 57. 90 ಮಿ.ಮೀ., ಸೊರಬ 58.50 ಮಿ.ಮೀ. ಹಾಗೂ ಹೊಸನಗರದಲ್ಲಿ 133.60 ಮಿ.ಮೀ. ಮಳೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Gajanuru DamKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTungaಗಾಜನೂರು ಜಲಾಶಯತುಂಗಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗ | ನಿಮಗೆ ರೇಡಿಯೋ RJ ಆಗುವ ಕನಸಿದೆಯೇ? ಹಾಗಾದರೆ ಇಲ್ಲಿದೆ ಅವಕಾಶ

Next Post

ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

June 12, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

June 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ-ಮೈಸೂರು, ಯಶವಂತಪುರ ನಡುವಿನ 3 ರೈಲುಗಳ ಮಹತ್ವದ ತುರ್ತು ಅಪ್ಡೇಟ್

June 12, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL