ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ವರುಣನ ಅಬ್ಬರ ಮುಂದುವರೆದಿದೆ. ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಅಣೆಕಟ್ಟೆಗಳಿಗೆ ನೀರು ಹರಿದುಬರುತ್ತಿದೆ.
ಎಲ್ಲಿ ಎಷ್ಟು ಮಳೆಯಾಯ್ತು?
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 220.50 ಮಿಮಿ ಮಳೆಯಾಗಿದ್ದು, ಸರಾಸರಿ 31.50 ಮಿಮಿ ಮಳೆ ದಾಖಲಾಗಿದೆ.
Also read: ರಾಜ್ಯದಲ್ಲಿ ರಾಮನ ಹಾಡು ಹಾಡಲೂ ಅನುಮತಿ ಪಡೆಯುವಂತ ದುಃಸ್ಥಿತಿಯಿದೆ: ಯತ್ನಾಳ್ ವಾಗ್ದಾಳಿ
ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 310.84 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 6.30 ಮಿಮಿ., ಭದ್ರಾವತಿ 5.30 ಮಿಮಿ., ತೀರ್ಥಹಳ್ಳಿ 56.50 ಮಿಮಿ., ಸಾಗರ 47.90 ಮಿಮಿ., ಶಿಕಾರಿಪುರ 12.40 ಮಿಮಿ., ಸೊರಬ 30.30 ಮಿಮಿ. ಹಾಗೂ ಹೊಸನಗರ 61.80 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ
ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1758.95 (ಇಂದಿನ ಮಟ್ಟ), 20792.00 (ಒಳಹರಿವು), 1733.90 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1796.50. ಭದ್ರಾ: 186 (ಗರಿಷ್ಠ), 141.70 (ಇಂದಿನ ಮಟ್ಟ), 1518.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 182.15. ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 14038.00 (ಒಳಹರಿವು), 14038.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24. ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 574.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4144 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.18 (ಎಂಎಸ್‍ಎಲ್‍ಗಳಲ್ಲಿ). ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1367 (ಒಳಹರಿವು), 762.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 561.50 (ಎಂಎಸ್‍ಎಲ್‍ಗಳಲ್ಲಿ).. ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 569.60 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1979.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.84 (ಎಂಎಸ್‍ಎಲ್‍ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 576.86 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 885.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 581.78 (ಎಂಎಸ್‍ಎಲ್‍ಗಳಲ್ಲಿ).
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post