Read - 2 minutes
ಈ ಸಮಯದಲ್ಲಿ ಮಾತನಾಡಿದ ಮಂಜುನಾಥ್ ಅವರು, ಪ್ರಚಾರಕ್ಕಾಗಿ ಈ ಕೆಲಸ ಮಾಡಿಲ್ಲ ನಾನು ಮೂಲತಃ ಇದೇ ಗ್ರಾಮದವನು ಜಲಾಶಯವನ್ನು ನೋಡಿಕೊಂಡು ಬೆಳೆದವನು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಆರ್ಥಿಕ ಪರಿಸ್ಥಿತಿಯ ಬಗ್ಗೆ ನನಗೆ ಅರಿವಿದೆ, ಮಾನವೀಯತೆಯ ಆಧಾರದ ಮೇಲೆ ಒಂದು ಸಣ್ಣ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭದ್ರಾ ಜಲಾಶಯವು ಸಮಸ್ತ ಅಚ್ಚುಕಟ್ಟು ರೈತರ ಅವಿಭಾಜ್ಯ ಅಂಗವಾಗಿದ್ದು, ಇಂತಹ ಜಲಾಶಯದಲ್ಲಿ ಹಗಲು ರಾತ್ರಿ ಕೆಲಸ ನಿರ್ವಹಿಸುವ ವಿವಿಧ ಸ್ಥರದ ಸಿಬ್ಬಂದಿಗಳು ಕೂಡ ನಮ್ಮ ರೈತರಷ್ಟೇ ಸಮಾನರು, ಅವರಿಗೂ ಸಮಾನ ಗೌರವ ಸಿಗಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.
ಭದ್ರಾ ಜಲಾಶಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸ್ಥರದ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಶೂ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಳೆದ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮಳೆ ಬಂದ ಸಮಯದಲ್ಲಿ ಮತ್ತು ಚಳಿ ಬಿದ್ದ ಅವಧಿಯಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದನ್ನು ಜಲಾಶಯ ಭೇಟಿಯ ಸಮಯದಲ್ಲಿ ನನ್ನ ಗಮನಕ್ಕೆ ತಂದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ನೀಡಲು ಆಲೋಚನೆ ಮಾಡಿ, ಸ್ಥಳೀಯ ಬಿಜೆಪಿ ಮುಖಂಡರಾದ ಮಂಜುನಾಥ್ ಅವರ ಗಮನಕ್ಕೆ ತಂದಾಗ ಮರು ಮಾತನಾಡದೆ ಒಪ್ಪಿಕೊಂಡು ಸಿಬ್ಬಂದಿಗಳಿಗೆ ರಕ್ಷಾ ಕವಚ ಗಳನ್ನು ಒದಗಿಸಿದ್ದಾರೆ ಎಂದರು.
ಈ ಸಮಯದಲ್ಲಿ ಮಾತನಾಡಿದ ಮಂಜುನಾಥ್ ಅವರು, ಪ್ರಚಾರಕ್ಕಾಗಿ ಈ ಕೆಲಸ ಮಾಡಿಲ್ಲ ನಾನು ಮೂಲತಃ ಇದೇ ಗ್ರಾಮದವನು ಜಲಾಶಯವನ್ನು ನೋಡಿಕೊಂಡು ಬೆಳೆದವನು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಆರ್ಥಿಕ ಪರಿಸ್ಥಿತಿಯ ಬಗ್ಗೆ ನನಗೆ ಅರಿವಿದೆ, ಮಾನವೀಯತೆಯ ಆಧಾರದ ಮೇಲೆ ಒಂದು ಸಣ್ಣ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ವಿನಾಯಕ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post