ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭಾರತದಲ್ಲಿ ಪ್ರತಿ ದಿನ ಸುಮಾರು 6000 ರೋಗಿಗಳಿಗೆ ಕ್ಷಯರೋಗ ಕಂಡುಬರುತ್ತಿದ್ದು, ಸುಮಾರು 600 ಜನ (5 ನಿಮಿಷಕ್ಕೆ 2 ರೋಗಿಗಳು) ಸಾವನ್ನಪ್ಪುತ್ತಿದ್ದಾರೆ. ಈ ರೋಗವು ತುಂಬಾ ಅಪಾಯಕಾರಿಯಾಗಿದ್ದು ಇದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಅರಿವನ್ನು ಮೂಡಿಸಬೇಕೆಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು.
ಇಂದು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಐಇಸಿ/ಐಸಿಸಿ ವಿಭಾಗ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯಲ್ಲಿ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಮತ್ತು ಕೋವಿಡ್-19 ಬಗ್ಗೆ ಮಾಹಿತಿ ಕಾರ್ಯಗಾರ ಕಾಲ ಘಲಿಸುತ್ತಿದೆ ಎಂಬ ಘೋಷಣೆಯೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕ್ಷಯ ಮತ್ತು ಕೋವಿಡ್-19 2ನೇ ಅಲೆಯು ಹೆಚ್ಚಾಗಿದ್ದು, ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಜನರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರತಿ ನಿಮಿಷಕ್ಕೆ ಇಬ್ಬರು ಕ್ಷಯರೋಗದಿಂದ ಮೃತಪಡುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಂಡರೆ ಕ್ಷಯರೋಗದಿಂದ ಮುಕ್ತರಾಗಬಹುದು. ರೋಗ ಹರಡುವಿಕೆ, ರೋಗಲಕ್ಷಣದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಿದಾಗ ರೋಗ ತಡೆಗಟ್ಟಲು ಸಾಧ್ಯ ಎಂದರು.
ವಿಶ್ವ ಆರೋಗ್ಯ ಸಂಸ್ಥೆ 2030ರೊಳಗೆ ಕ್ಷಯರೋಗ ನಿರ್ಮೂಲನೆ ಉದ್ದೇಶ ಹೊಂದಿದೆ. ಭಾರತದಲ್ಲಿ 2025 ರೊಳಗೆ ಕ್ಷಯರೋಗ ಮುಕ್ತ ದೇಶವಾಗಿಸಲು ಉದ್ದೇಶಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post