No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ

kalpa News by kalpa News
November 20, 2025
in ಶಿವಮೊಗ್ಗ
0
ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಸೆಲ್ಫಿ ಸಂಸ್ಕೃತಿಯ ಸಂದರ್ಭದಲ್ಲಿ ನಾವು ನಮ್ಮನ್ನೇ ಅತಿ ಮುಖ್ಯವಾಗಿ ಬಿಂಬಿಸಿಕೊಳ್ಳುವಂತಹ ಆತಂಕಕಾರಿ ಬೆಳವಣಿಗೆ ಆಗುತ್ತಿದೆ. ಈ ಸಂದರ್ಭದಲ್ಲಿ ಬೆಳಕನ್ನು ಆರಿಸುವಂತಹ ಸಂಸ್ಕೃತಿ ಬೇಕಿಲ್ಲ್ಲ ಬೆಳಕನ್ನು ಹೊತ್ತಿಸುವ ಸಂಸ್ಕೃತಿ ಮತ್ತೆ ಬೆಳಕನ್ನು ಪಸರಿಸುವ ಸಂಸ್ಕೃತಿ ಹೆಚ್ಚಾಗಬೇಕು, ಕನ್ನಡವೂ ಸಾಂಸ್ಕೃತಿಕ ಬೆಳಕಾಗಬೇಕೆ ಹೊರತು ಸಂಘದ ಕಿಡಿಯಾಗಬಾರದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕುಮಾರಚಲ್ಯ ಹೇಳಿದರು.

ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ಶಿವಮೊಗ್ಗ ಹಾಗೂ ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ನುಡಿಯ ದೀಕ್ಷೆ ನಾಡಿನ ರಕ್ಷೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಒಬ್ಬರಿಂದ ಒಬ್ಬರಿಗೆ ಈ ಬೆಳಕನ್ನು ದಾಟಿಸುವ ವಿಶಾಲ ಮನಸ್ಥಿತಿ ಬರಬೇಕು. ನಮ್ಮ ಕನ್ನಡ ಸಂಸ್ಕೃತಿ ದೇಶಿಯ ಸಂಸ್ಕೃತಿಯ ಆಗಿ ಇರುವುದೇ ಹೊರತು ಅದು ಆಧುನಿಕ ಸಂಸ್ಕೃತಿ ಅಲ್ಲ ಈ ದೇಶಿಯ ಸಂಸ್ಕೃತಿಗೆ ದೀಪ ಹತ್ತಿಸುವುದು ಸಂಕೇತ. ಈ ದೀಪ ಹತ್ತಿಸಲಿಕ್ಕೆ ಬೇಕಾದಂತಹ ಹಣತೆ, ಬತ್ತಿ, ಎಣ್ಣೆ ಇವುಗಳನ್ನ ಮಾಡುವವರು ಬೇರೆ ಬೇರೆ ವರ್ಗಗಳಿಗೆ ಸೇರಿದವರಾದರು ಅದರಿಂದ ಹೊಮ್ಮುವ ಬೆಳಕು ಮಾತ್ರ ಎಲ್ಲರಿಗೆ ಬೇಕಾಗುವಂತದ್ದು. ಈ ಭಾಷೆ ಅನ್ನುವುದು ಯಾವುದೇ ಕುಲಕ್ಕೆ ಜಾತಿಗೆ ಧರ್ಮಕ್ಕೆ ಸೀಮಿತವಾಗಿಲ್ಲ ಈ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವ ಅಲ್ಲ ಅದು ಕರ್ನಾಟಕ ರಾಜ್ಯೋತ್ಸವವಾಗಬೇಕು ವಿಭಿನ್ನ ವರ್ಗಗಳ ಎಲ್ಲರೂ ಒಟ್ಟಿಗೆ ಸೇರಿ ಸಂಭ್ರಮವನ್ನು ಆಚರಿಸುವಂತಹ ರಾಜ್ಯೋತ್ಸವವಾಗಬೇಕು ಅವಾಗ ಮಾತ್ರ ನಿಜವಾದ ಕರ್ನಾಟಕ ರಾಜ್ಯೋತ್ಸವವಾಗುತ್ತದೆ. ಕರ್ನಾಟಕ ರಾಜ್ಯವು ವಿಭಿನ್ನ ಸಂಸ್ಕೃತಿಯ ನೆಲೆಯಾಗಿದೆ ಈ ವಿಭಿನ್ನ ಸಂಸ್ಕೃತಿಯ ನೆಲೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದೇವೆ. ಒಟ್ಟಿಗೆ ಭಾಷೆಯನ್ನು ಬೆಳೆಸಬೇಕಾಗಿದೆ, ವಿವೇಕದಿಂದ ಭಾಷೆಯನ್ನು ಬೆಳೆಸುವುದರಿಂದ ಆ ಭಾ?ಯು ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

ಭಾಷೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು ಅದು ಸಂವಹನಕ್ಕೆ ಮಾತ್ರ ಎಂಬ ಒಂದು ಭಾವನೆ ಇರಬಾರದು ಅದು ನಮ್ಮ ಸಂಸ್ಕೃತಿ ದೇಶ ಸಮುದಾಯವನ್ನು ಪ್ರತಿನಿಧಿಸುತ್ತದೆ ಭಾ?ಯು ಒಂದು ಗಟ್ಟಿಯಾದಂತಹ ಸಂಸ್ಕೃತಿಯ ನೆಲಮೂಲವನ್ನು ತಿಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯನ್ನು ಅಕ್ಷರಸ್ಥರು ಕೂಡ ಬೆಳೆಸುತ್ತಿಲ್ಲ ಎಂಬುದು ಕಳವಳಕಾರಿಯಾಗಿದೆ. ಹೊಸ ಭಾಷೆಯನ್ನು ಕಲಿಯಲು ಯಾವುದೇ ಅಭ್ಯಂತರಗಳು ಇರಬಾರದು. ಯಾಕೆಂದರೆ ಕನ್ನಡವೂ ಅನೇಕ ಅನ್ಯ ಭಾಷೆಗಳ ಪದಗಳಿಂದ ಸಮೃದ್ಧವಾದಂತಹ ಭಾಷೆ. ಹಾಗಾಗಿ ಕನ್ನಡ ಭಾಷೆಯು ಸಾಮರಸ್ಯದ, ಸಂಸ್ಕೃತಿಯ ಭಾಷೆಯಾಗಿ ರೂಪುಗೊಂಡಿದೆ. ಕನ್ನಡದ ಮೇರು ಸಾಹಿತಿಗಳಾದ ಮಾಸ್ತಿ, ಡಿ.ವಿ.ಜಿ., ಪು.ತೀ.ನ. ಅವರು ಮೂಲ ಅನ್ಯಭಾಷಿಕರಾದರೂ ಕನ್ನಡಕ್ಕೆ ಕೀರ್ತಿಯನ್ನು ತಂದ ಮಹನೀಯರು ಎಂದು ತಿಳಿಸಿದರು.

ಕರ್ನಾಟಕ ಬಹು ಭಾಷೆಗಳ ವೈವಿಧ್ಯತೆಯನ್ನು ಒಳಗೊಂಡಿರುವ ಪ್ರದೇಶ ಹಾಗಾಗಿ ಸಾಮರಸ್ಯವೂ ಅದರ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಅಭಿಪ್ರಾಯ ಪಟ್ಟರು. ಆವೇಶದಿಂದ ಯಾವುದೇ ಭಾಷೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದರು. ಕನ್ನಡ ರಾಜ್ಯೋತ್ಸವವು ತಿಂಗಳ ನಾಟಕದ ರಾಜ್ಯೋತ್ಸವವಾಗದೆ, ಸಂಘರ್ಷ ಮತ್ತು ದ್ವೇಷಗಳಿಂದ ದೂರವಿರುವ ಸಾಮರಸ್ಯದ ರಾಜ್ಯೋತ್ಸವವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮವು ದೀಪ ಬೆಳಗುವುದರ ಮೂಲಕ ಮತ್ತು ಕನ್ನಡ ಭುವನೇಶ್ವರಿಗೆ ಪುಷ್ಪವನ್ನು ಅರ್ಪಿಸಿವುದರ ಮೂಲಕ ಉದ್ಘಾಟನೆಗೊಂಡು ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಪ್ರಾರಂಭವಾಯಿತು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಮೋಹನ್ ಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿ ಮಾತನಾಡಿ, ನಿಸಾರ್ ಅಹಮದ್ ಅವರ ಕವಿತೆಯ ಸಾಲುಗಳನ್ನು ಉಲ್ಲೇಖಿಸಿ ರಕ್ತ ಸಂಬಂಧಕ್ಕಿಂತ ಭಾವ ಸಂಬಂಧವೂ ಮುಖ್ಯವಾಗುತ್ತದೆ ಯಾವುದೇ ಸರ್ಕಾರವು ಒಂದು ಭಾಷೆಯನ್ನು ಬೆಳೆಸಬೇಕು ಸರ್ಕಾರವೇ ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎನ್ನುವುದಕ್ಕಿಂತ ಆ ಭಾಷಿಕರು ಕನ್ನಡ ಭಾಷೆಯನ್ನು ಉಳಿಸುವುದಕ್ಕಿಂತ ಬೆಳೆಸುವ ಮತ್ತೆ ಬಳಸುವ ವ್ಯವಸ್ಥೆ ಆಗಬೇಕು ಎಂಬುದನ್ನು ವಿವರಿಸಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ರವರು ಕನ್ನಡವನ್ನು ಮನಸ್ಸಿನಲ್ಲಿ, ಹೃದಯದಲ್ಲಿ ಇಳಿಸಿಕೊಳ್ಳಬೇಕಾದರೆ, ಭಾಷೆಯ ಬಳಕೆ ಅತಿ ಮುಖ್ಯವಾಗಿರುತ್ತದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮ, ಸಾಮರಸ್ಯ, ಗೌರವ, ಪ್ರೀತಿಯ ಸಂಭ್ರಮವಾಗಬೇಕು. ರಾಜ್ಯೋತ್ಸವವು ಎಲ್ಲಾ ಧರ್ಮ ಜಾತಿ ಕಟ್ಟುಪಾಡುಗಳನ್ನು ಮೀರಿದ ಒಂದು ಉತ್ಸವವಾಗಬೇಕು. ಇದೊಂದು ಎಲ್ಲರೂ ಆಚರಿಸುವ ಹಬ್ಬವಾಗಬೇಕು. ಆ ಮೂಲಕ ಕನ್ನಡ ಸಂಸ್ಕೃತಿಯನ್ನು ಬೆಳೆಸೋಣ ವಿಶಾಲಗೊಳಿಸೋಣ ಜಗತ್ತಿನಾದ್ಯಾಂತ ಕನ್ನಡ ಮನಸ್ಸನ್ನ ಕಟ್ಟೋಣ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಕು. ತನ್ಮಯೀ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಕು. ವೈಷ್ಣವಿ, ದ್ವಿತೀಯ ಬಿ.ಎಸ್ಸಿ. ಅವರು ಸ್ವಾಗತ ನೃತ್ಯವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಪ್ರೊ. ಕುಮಾರಚಲ್ಯ ಅವರನ್ನು ಹಾಗೂ ಮಣಿಪಾಲ್ ಆಕಾಡೆಮಿಯ ಡಾ. ರಾಜಲಕ್ಷ್ಮಿರವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿ ಅವರು, ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ, ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಆರ್ಚನಾ ಭಟ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಮಧು ಟಿ. ಅವರು ವಂದನಾರ್ಪಣೆಯನ್ನು ಮಾಡಿದರು. ಕು. ಸ್ಪೂರ್ತಿ ವೈ.ಎಚ್., ತೃತೀಯ ಬಿ.ಎಸ್.ಡಬ್ಲೂ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

Next Post

GM/SWR conducts inspection of KSR Bengaluru – Whitefield Section

kalpa News

kalpa News

Next Post
SWR to Run Special Train Services Between Bengaluru, Belagavi and Mysuru

GM/SWR conducts inspection of KSR Bengaluru - Whitefield Section

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL