ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಕದಳಿ ವನಿತಾ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆ ಪ್ರಥಮ ಸ್ಥಾನ ಗಳಿಸಿದೆ.
ಕದಳಿ ವನಿತಾ ಸಮಾಜದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ರಸ ಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ 9 ಮತ್ತು 10 ನೆಯ ತರಗತಿ ವಿದ್ಯಾರ್ಥಿಗಳಾದ ಕೆ.ಎನ್. ವಿನೀತ್ ರಾವ್, ತುಷಾರ್ ವೈಷ್ಣವ್, ಬಿಲ್ವತೇಜ, ವೇದಾಂತ್ ರಾವ್ ಭಾಗವಹಿಸಿದ್ದರು. ಸುಮಾರು 31 ಶಾಲೆಗಳು ಭಾಗವಹಿಸಿದ್ದು, ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಈ ಸಾಧನೆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಶಾಲಾ ಸಂಯೋಜಕರಾದ ದಿವ್ಯಾ ಶೆಟ್ಟಿ, ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ, ಶುಭ ಕೋರಿದ್ದಾರೆ.
Also read: ಉಕ್ಕಿನ ಮಹಿಳೆ ಇಂದಿರಾಗಾಂಧಿ ಆಡಳಿತ ಎಂದಿಗೂ ಮಾದರಿ: ಕಾಂಗ್ರೆಸ್ ಮುಖಂಡ ತಂಗರಾಜ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















