ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗೋಪಾಳದಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ನವಂಬರ್ ಹತ್ತರಂದು ಕಾರವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಶಿವಮೊಗ್ಗ ರಾಮಕೃಷ್ಣ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಎಸ್.ಸಿ. ತೀರ್ಥೇಶ್ ಹಾಗೂ ಸೂರ್ಯಕಲಾ ಎಲ್. ಅವರ ಪುತ್ರಿ ಸೂಕ್ತಿ ತೀರ್ಥೇಶ್ ಅವರು ಆಯ್ಕೆಯಾಗಿದ್ದಾರೆ.
ಅಂತೆಯೇ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ದಿನೇಶ್ ಶೆಣೈ ಹಾಗೂ ಮಮತಾ ಶಣೈ ಅವರ ಪುತ್ರಿ ದಿಶಾ ಶಣೈ ಅವರು ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಪ್ರಶಸ್ತಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಪರವಾಗಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post