ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ನಗರದ ನವುಲೆಯ ಕೆಎಸ್‍ಸಿಎ ಕ್ರಿಕೆಟ್ ಮೈದಾನದಲ್ಲಿ #Navule KSCA Cricket Stadium ಆರಂಭವಾದ ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾವಳಿಗೆ #Ranaji Trophy Tournament ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅಧಿಕೃತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ ಈ ಕ್ರಿಕೆಟ್ ಪಂದ್ಯಾವಳಿ ಅತ್ಯಂತ ಮಹತ್ವ ಪಡೆದಿದ್ದು, ಕ್ರೀಡಾಪ್ರೇಮಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಪ್ರಸಿದ್ಧ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಕೂಡ ಪ್ರತಿಭಾವಂತ ಕ್ರಿಕೆಟ್ ಆಟಗಾರರಿದ್ದು ಅವರಿಗೆ ಈ ಪಂದ್ಯಾವಳಿ ಪ್ರೋತ್ಸಾಹ ನೀಡಲಿ ಮತ್ತು ಈ ಪಂದ್ಯಾವಳಿಯ ಎರಡೂ ತಂಡಗಳ ಕ್ರಿಕೆಟ್ ಆಟಗಾರರು ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post