ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜಿವಾಲ ಹಾಗೂ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಮತ್ತು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಇತ್ತೀಚೆಗೆ ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂಟಪಕ್ಕೆ ಕಾಂಗ್ರೆಸ್ ಗ್ಯಾರಂಟಿ ಗೃಹಲಕ್ಷ್ಮಿ ಗೃಹ ಜ್ಯೋತಿ, ಕಾರ್ಡ್‌ಗಳನ್ನು ಬಿಡುಗಡೆ ಮಾಡಲು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೇಶ್ ಆಯೋಜಿಸಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಪ್ರಚಾರದ ವಾಹನಕ್ಕೆ ಗಣ್ಯರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ವಿರೋಧ ಪಕ್ಷದ ನಾಯಕರದ ರೇಖಾ ರಂಗನಾಥ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೆ. ರಂಗನಾಥ್, ಮಹಮ್ಮದ್ ಆರಿಫ್ ಉಲ್ಲಾ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್, ಕೆಪಿವೈಸಿಸಿ ಕಾರ್ಯದರ್ಶಿ ಆರ್.ಕಿರಣ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್‌ನ ಎಸ್. ಕುಮರೇಶ್, ಹಾಗೂ ಪಕ್ಷದ ನಾಯಕರು ಕಾರ್ಯಕರ್ತರು ಇದ್ದರು.
Also read: ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ: ಕೇಂದ್ರದ ಮನವಿ ತಿರಸ್ಕರಿಸಿದ ಸುಪ್ರೀಂ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















