ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಯಿ ಕಲಿಸಿದ ಸಂಸ್ಕಾರ, ಗುರುವಿನ ಮಾರ್ಗದರ್ಶನ ಹಾಗೂ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಅಳವಡಿಸಿಕೊಂಡು ಮೇರು ಪರ್ವತದಷ್ಟು ಬೆಳೆದವರು ಕುವೆಂಪು. #Kuvempu
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲಿ ಅತ್ಯುತ್ತಮ ಕೃತಿಗಳನ್ನು ರಚಿಸಿ “ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು” ಎಂದು ಕನ್ನಡಿಗರನ್ನು ಬಡಿದೆಬ್ಬಿಸಿ, ವಿಶ್ವಮಾನವ ಪರಿಕಲ್ಪನೆಯನ್ನು ಇಡೀ ಜಗತ್ತಿಗೆ ಸಾರಿದ ರಸಋಷಿಯ 121ನೇ ಜನ್ಮದಿನೋತ್ಸವ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಇಎಸ್ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಯ ಸೋಮಶೇಖರಯ್ಯ ಹೆಚ್.ಎಮ್., ಉಪಪ್ರಾಂಶುಪಾಲರು, ಶಾಲಾ ಸಂಯೋಜಕರು, ಹಾಗೂ ಶಿಕ್ಷಕರು, ಭಾಗವಹಿಸಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ನಡೆಸಿಕೊಟ್ಟ ಮಕ್ಕಳನ್ನು ಅಭಿನಂದಿಸಿದರು.
ಕಾರ್ಯಕ್ರಮದ ಸ್ವಾಗತ ತನ್ಮಯಿ, 8ನೇ ತರಗತಿ, ಕುವೆಂಪುರವರ ಪರಿಚಯ ಖುಷಿ, 6ನೇ ತರಗತಿ, 8ನೇ ತರಗತಿಯ ವಿದ್ಯಾರ್ಥಿಗಳಿಂದ ಕವನ ವಾಚನ, 7ನೇ ತರಗತಿಯ ವಿದ್ಯಾರ್ಥಿಗಳಿಂದ ಕಿರು ಪ್ರಹಸನ ನಡೆಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಜೀವಿತಾ ಹಾಗೂ ಚಂದನ ನೆರೆವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















