ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಅವೈಜ್ಞಾನಿಕ ವರ್ಗಾವಣೆ ಮಾಡುತ್ತಿರುವುದರಿಂದ ಇದರ ಪರಿಣಾಮವಾಗಿ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿಲ್ಲದೇ ಬಡ ರೋಗಿಗಳು ಕಣ್ಣೀರು ಹಾಕುತ್ತಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ #MLA Araga Gnanendra ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸರ್ಕಾರ ಕ್ಲಿನಿಕಲ್ ಮತ್ತು ನಾನ್ ಕ್ಲಿನಿಕಲ್ ವಿಭಾಗ ಮಾಡಿ ವರ್ಗಾವಣೆ ದಂಧೆಗೆ ಇಳಿದಿದ್ದು, ಆಸ್ಪತ್ರೆ ಖಾಲಿಯಾಗಿದೆ. ಸಿಬ್ಬಂದಿ ಕೊರತೆ ಇದೆ. ಸ್ಟಾಫ್ ನರ್ಸ್‌ಗಳ ಕೊರತೆ ಇದೆ. ಬಡವರಿಗೆ ಇದರಿಂದ ಆರೋಗ್ಯ ಮರೀಚಿಕೆಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರ ಪುನರ್ ಪರಿಶೀಲನೆ ಮಾಡಬೇಕು ಎಂದರು.

ಕಾಂತರಾಜ್ ವರದಿ ಜಾರಿಗೆ ತರದೇ ಈಗ ಮತ್ತೊಂದು ಸಮೀಕ್ಷೆಗೆ ಆದೇಶ ನೀಡಿ ಗೊಂದಲ ಸೃಷ್ಟಿ ಮಾಡಿದೆ. ಹಿಂದುಳಿದ ವರ್ಗಗಳ ಸಮೀಕ್ಷೆ ಕೂಡ ಕಾಟಾಚಾರಕ್ಕೆ ಮಾಡಿ ಕೆಲವೆಡೆ ಸುಳ್ಳು ಸಮೀಕ್ಷೆಯನ್ನು ನಡೆಸಿದ್ದಾರೆ. ಈಗಾಗಲೇ ಸಾರ್ವಜನಿಕರು ಈ ಬಗ್ಗೆ ಆರೋಪಿಸುತ್ತಿದ್ದಾರೆ. ಸರ್ಕಾರ ತನ್ನ ಭ್ರಷ್ಟಾಚಾರ ಮುಚ್ಚಿ ಹಾಕಲು ಸಮೀಕ್ಷೆಯ ಗೊಂದಲ ಸೃಷ್ಟಿಸಿ ಜನರ ದಿಕ್ಕುತಪ್ಪಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಿ.ಹೆಚ್. ಮಾಲತೇಶ್, ವಿನ್ಸೆಂಟ್ ರೋಡ್ರಿಗಸ್, ಹರಿಕೃಷ್ಣ, ರಾಮು, ಚಂದ್ರಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post