ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಸಂಬಂಧ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ನಡೆದ ಹಿಂದೂ ಮಹಾ ಮಂಡಳಿಯ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಹಿಂದೂ ಮಹಾಸಭಾ ಮಂಡಳಿ ಅಧ್ಯಕ್ಷರಾದ ಎಂ. ಕೆ. ಸುರೇಶ್ ಕುಮಾರ್, ಸತ್ಯನಾರಾಯಣ, ಗೋಪಾಲಸ್ವಾಮಿ, ನಿರಂಜನ್, ದತ್ತಾತ್ರೇಯ ರಾವ್ ಹಾಗೂ ಮಂಡಳಿಯವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post