ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದ್ದು, ಕುಂಭದ್ರೋಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಹಾಗೂ ಮೈಸೂರು ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಮತ್ತು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜುಲೈ 17ರವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯಾಗಲಿದೆ #Heavy rain ಎಂದು ವರದಿಯಾಗಿದೆ.
ಇನ್ನು, ಬೆಳಗಾವಿಯಲ್ಲಿ ಜುಲೈ 18ರವರೆಗೂ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ರಾಯಚೂರು, ಯಾದಗಿರಿ, ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ #Orange alert ಮಾಡಲಾಗಿದೆ.
Also read: ಶಿವಮೊಗ್ಗ | ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಜುಲೈ 17-18ರಂದು ಆರೆಂಜ್, ಜುಲೈ 19ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post