ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ಮಳೆನಾಡಾಗಿ ಪರಿವರ್ತನೆಯಾಗಿರುವ ಮಲೆನಾಡು, ಕರಾವಳಿಯ ಆರು ಜಿಲ್ಲೆಗಳಲ್ಲಿ ಇಂದು, ನಾಳೆ ರೆಡ್ ಅಲರ್ಟ್, #Red alert ಜುಲೈ 22ರವರೆಗೂ ಆರೆಂಜ್, ಯೆಲ್ಲೋ ಅಲರ್ಟ್ #Yellow alert ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಈ ಕುರಿತಂತೆ ವರದಿ ಬಿಡುಗಡೆ ಮಾಡಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತೀ ಧಾರಾಕಾರ ಮಳೆ ಸುರಿಯಲಿದೆ ಎಂದಿದೆ.
ಉಳಿದಂತೆ ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಜುಲೈ 22ರವೆರಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post