ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಶುಸಂಗೋಪನಾ ಇಲಾಖೆ ಹಾಗೂ ವೈದ್ಯಕೀಯ ಸಂಸ್ಥೆಗಳ #Shivamogga Veterinary College ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ #Minister Venkatesh ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ವಿಧಾನಸೌಧದಲ್ಲಿ ನಡೆದ ಸಮಿತಿ ಸಭೆಯ ಬಳಿಕ ಸಚಿವರನ್ನು ಭೇಟಿಯಾದ ಶಾಸಕರು, ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ‘ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ’ದ ಬಲವರ್ಧನೆಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಕೇಂದ್ರಕ್ಕೆ ಅಗತ್ಯವಿರುವ 16 ತಾಂತ್ರಿಕ ಸಿಬ್ಬಂದಿಗಳನ್ನು ತಕ್ಷಣವೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಶಾಸಕರ ಪ್ರಸ್ತಾವನೆಗಳನ್ನು ಆಲಿಸಿದ ಸಚಿವರು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
