ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾಯುಭಾರ ಕುಸಿತದ ಪರಿಣಾಮ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ 500 ಕ್ಯೂಸೆಕ್ಸ್ ನೀರನ್ನು ತುಂಗಾ ನದಿಗೆ ಹರಿಸಲಾಗಿದೆ.
ವಾಯುಭಾರ ಕುಸಿತದಿಂದಾಗಿ ತೌಕ್ತೆ ಚಂಡಮಾರುತ ಬೀಸುತ್ತಿರುವ ಪರಿಣಾಮವಾಗಿ ತೀರ್ಥಹಳ್ಳಿ, ಆಗುಂಬೆ, ಚಿಕ್ಕಮಗಳೂರು ಜಿಲ್ಲೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತೀರ್ಥಹಳ್ಳಿ ಭಾಗದಲ್ಲೂ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಅಣೆಕಟ್ಟೆಗೆ 984 ಕ್ಯೂಸೆಕ್ಸ್ ನೀರು ಒಳಹರಿವು ಬಂದಿದ್ದು, 500 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ರೆಡ್‌ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮಳೆಯಿಂದಾಗಬಹುದಾದ ತೊಂದರೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post