ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ Bhadra reservoir ತುಂಗಾ-ಭದ್ರಾ ನದಿಗೆ 1.00 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ.
ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6.00 ರಿಂದ ಮೇ 09 ರ ಬೆಳಗ್ಗೆ 6.00 ರವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್ ನಂತೆ ಒಟ್ಟು 11574 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು. ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಇತ್ಯಾದಿಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

Also read: ಬೀದರ್ ದಕ್ಷಿಣ: ಸರ್ವಧರ್ಮ ಸಮನ್ವಯ ಸಾರುತ್ತಿರುವ ಬಂಡೆಪ್ಪ ಖಾಶೆಂಪುರ್












Discussion about this post