No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೋವು ನಿವಾರಿಸುವುದು `ದೇವರ ಸೇವೆ’: ಡಾ.ಶಾಂತರಾಮ ಶೆಟ್ಟಿ ಅಭಿಮತ

ಸುಬ್ಬಯ್ಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ಕೀಲು ಮತ್ತು ಮೂಳೆ ತಜ್ಞರ ಸಮ್ಮೇಳನ

kalpa News by kalpa News
February 3, 2024
in ಶಿವಮೊಗ್ಗ
0
ನೋವು ನಿವಾರಿಸುವುದು `ದೇವರ ಸೇವೆ’: ಡಾ.ಶಾಂತರಾಮ ಶೆಟ್ಟಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಓರ್ವ ವೈದ್ಯನಿಗೆ ರೋಗಿಗಳೇ ದೇವರಾಗಿದ್ದು, ಅಂತಹವರ ನೋವು ನಿವಾರಿಸುವಂತಹ ಅವಕಾಶವೆಂಬ ದೊಡ್ಡ ಉಡುಗೊರೆಯನ್ನು ದೇವರು ನಮಗೆ ನೀಡಿದ್ದಾನೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಕೀಲು ತಜ್ಞರಾದ ಮಂಗಳೂರಿನ ಪ್ರೊ. ಡಾ. ಎಂ. ಶಾಂತರಾಮಶೆಟ್ಟಿ Dr. Shantharama Shetty ಅಭಿಪ್ರಾಯಪಟ್ಟರು.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕೀಲು ಮತ್ತು ಮೂಳೆ ತಜ್ಞರ 48ನೇ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ನಾವು ಎಲ್ಲವನ್ನೂ ಮಧ್ಯಮ ಮಟ್ಟದಲ್ಲಿ ಮಾಡುತ್ತೇವೆ, ಮಧ್ಯಮ ಮಟ್ಟದಲ್ಲಿ ಕಲಿಯುತ್ತೇವೆ. ಹಾಗೂ ನಮ್ಮ ತೃಪ್ತಿಗಾಗಿ ಮಾತ್ರ ನಾವು ಹೆಚ್ಚಿನ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮ್ಮ ವೃತ್ತಿ ಹಾಗಲ್ಲ. ಯಾಕೆಂದರೆ ಜನರ ನೋವು ನಿವಾರಿಸಲು ದೇವರು ನಮಗೆ ಈ ಉಡುಗೊರೆಯನ್ನು ನೀಡಿದ್ದಾನೆ. ಇದಕ್ಕಾಗಿ ನಾವು ಅದೃಷ್ಠವಂತರು ಎಂದರು.

ಮೊಣಕಾಲು, ಕುತ್ತಿಗೆ ಸೇರಿದಂತೆ ಯಾವುದೇ ರೀತಿಯ ನೋವು ಇರಲಿ. ಅವುಗಳನ್ನು ನಿವಾರಿಸುವ ಪ್ರಯತ್ನ ಮಾಡುವ ಅವಕಾಶವನ್ನು ದೇವರು ನಮಗೆ ನೀಡಿದ್ದಾನೆ. ಇದನ್ನು ಮೂಳೆ ಮತ್ತು ಕೀಲು ತಜ್ಞರು ಅದರಲ್ಲೂ ಯುವ ವೈದ್ಯರು ಅತ್ಯಂತ ಸಮರ್ಥವಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ನಾನು ಸುಮಾರು 53 ವರ್ಷದಿಂದ ಶಸ್ತ್ರಚಿಕಿತ್ಸಕನಾಗಿಯೂ ವಿದ್ಯಾರ್ಥಿಗಳಿಗೆ ಪಾಠವನ್ನೂ ಸಹ ಮಾಡಿದ್ದೇನೆ. ಸಾಕಷ್ಟು ಹೆಸರು ಹಾಗೂ ಹಣ ಮಾಡಿದ್ದೇನೆ. ಇವೆಲ್ಲಕ್ಕೂ ಮಿಗಿಲಾಗಿ ನನಗೆ ತೃಪ್ತಿ ನೀಡಿರುವುದು ರೋಗಿಗಳ ನೋವು ನಿವಾರಣೆ ಮಾಡುವ ಕಾರ್ಯ. ಇದೇ ನಿಜವಾದ ಆತ್ಮತೃಪ್ತಿ. ಇದನ್ನು ಇಂದಿನ ಯುವ ವೈದ್ಯರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
Kalahamsa Infotech private limitedಮೂಳೆ ಮತ್ತು ಕೀಲು ನೋವನ್ನು ನಿರ್ವಹಿಸಲು ಮತ್ತು ಚಿಕಿತ್ಸೆ ನೀಡಲು ಮೂಳೆಶಸ್ತ್ರಚಿಕಿತ್ಸೆಯು ಪ್ರಮುಖವಾಗಿದೆ. ಇದು ನಮ್ಮಲ್ಲಿ ಹೆಚ್ಚಿನ ವೈದ್ಯರು ನಮ್ಮ ಜೀವಿತಾವಧಿಯಲ್ಲಿ ಎದುರಿಸುತ್ತಾರೆ. ಒಮ್ಮೆ ನೀವು ಮೂಲಭೂತ ಅಂಶಗಳನ್ನು ಅರ್ಥಮಾಡಿಕೊಂಡರೆ ಅಲ್ಲಿಂದ ನೀವು ಉತ್ತಮ ಚಿಕಿತ್ಸೆಯನ್ನು ನೀಡಬಹುದು ಎಂದು ಯುವ ವೈದ್ಯರಿಗೆ ತಿಳಿ ಹೇಳಿದರು.

Also read: ಬಿಜೆಪಿ ಭೀಷ್ಮ ಎಲ್.ಕೆ. ಅಡ್ವಾಣಿಗೆ `ಭಾರತರತ್ನ’ದ ಗೌರವ

ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು, ದೇಶಕ್ಕೆ ಕುವೆಂಪು ಅವರಂತಹ ಶ್ರೇಷ್ಟ ಕವಿಗಳನ್ನು ನೀಡಿದ ಜಿಲ್ಲೆ ಶಿವಮೊಗ್ಗ. ಮಲೆನಾಡಿನ ಸುಂದರ, ಸ್ವಚ್ಛ ಅರಣ್ಯ ಪ್ರದೇಶದ ನಡುವೆ ಇರುವ ಶಿವಮೊಗ್ಗದಂತಹ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಮಟ್ಟದ ಈ ಸಮ್ಮೇಳನ ಆಯೋಜಿಸಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದರು.
ರಾಜ್ಯ ಸಂಘದ ಡಾ.ಎಡ್ವರ್ಡ್ ನಜರೆತ್ ಮಾತನಾಡಿ, ಡಾ. ಸುಧೀಂದ್ರ ಅವರ ನೇತೃತ್ವದಲ್ಲಿ ಈ ಸಮ್ಮೇಳನ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಈ ಸಮ್ಮೇಳನ ಆಯೋಜಿಸಿರುವುದು ಸಂತೋಷದ ವಿಚಾರ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಘಟನೆ ಮಾಡಿ, ಈ ಕ್ಷೇತ್ರದಲ್ಲಿರುವ ಅತ್ಯಾಧುನಿಕ ಅವಕಾಶಗಳನ್ನು ಬಳಸಿಕೊಂಡು ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿನಯ ಶ್ರೀನಿವಾಸ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಅವಕಾಶಗಳಿಗೆ ವೇದಿಕೆಯನ್ನು ಮುಕ್ತವಾಗಿರಿಸಿದ್ದೇವೆ ಎಂದರು.

ಹಿಂದೆ ನ್ಯೂರೋ ಸರ್ಜರಿಗೆ ಸಂಬಂಧಿಸಿದಂತೆ ಸಮ್ಮೇಳನ ಹಾಗೂ ಕೆಲವು ಸಣ್ಣ ಮಟ್ಟದ ಸಮ್ಮೇಳನಗಳನ್ನೂ ಸಹ ಯಶಸ್ವಿಯಾಗಿ ನಡೆಸಿದ್ದೇವೆ. ಇಂತಹ ಚಟುವಟಿಕೆಗಳಿಗೆ ನಮ್ಮ ಸಂಸ್ಥೆಯ ವೈದ್ಯಕೀಯ ನಿರ್ದೇಶಕರಾದ ಡಾ.ಎಸ್. ನಾಗೇಂದ್ರ ಅವರು ಒತ್ತು ನೀಡುತ್ತಲ್ಲೇ ಬಂದಿದ್ದಾರೆ. ಈ ನಿಟ್ಟಿನಲ್ಲಿ ಈ ಅದ್ಬುತ ಸಮ್ಮೇಳನವನ್ನು ನಮ್ಮ ಕಾಲೇಜಿನಲ್ಲಿ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಎಲ್ಲರಿಗೂ ಸಂಸ್ಥೆಯ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಸಮ್ಮೇಳನದ ಸಂಘಟನಾಧ್ಯಕ್ಷ ಡಾ.ಪಿ.ಆರ್. ಸುಧೀಂದ್ರ ಮಾತನಾಡಿ, ಪ್ರತಿ ವರ್ಷವು ಸಮ್ಮೇಳನ ನಡೆಸಲಾಗುತ್ತಿದೆ. 2004ರಲ್ಲಿ ಶಿವಮೊಗ್ಗದಲ್ಲಿ ನಡೆದಿತ್ತು. 20 ವರ್ಷಗಳ ನಂತರ ನಮ್ಮ ಸಂಘಕ್ಕೆ ಅವಕಾಶ ಸಿಕ್ಕಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು.

ರಾಜ್ಯದ ಮತ್ತು ಹೊರರಾಜ್ಯದ ಸುಮಾರು 1 ಸಾವಿರಕ್ಕೂ ಹೆಚ್ಚು ಕೀಲು ಮತ್ತು ಮೂಳೆ ತಜ್ಞರು ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದಿಂದ ಸುಮಾರು 200ಕ್ಕೂ ಹೆಚ್ಚು ಸಂಪನ್ಮೂಲ ತಜ್ಞ ವೈದ್ಯರು ಭಾಗವಹಿಸಿ ಮಾರ್ಗದರ್ಶನ ನೀಡುತ್ತಿದ್ದಾರೆ. ಸುಮಾರು 400ಕ್ಕೂ ಸಂಶೋಧನಾ ಪ್ರಬಂಧಗಳು ಮಂಡನೆಯಾಗುತ್ತಿವೆ.

ಮೈಸೂರಿನ ಖ್ಯಾತ ವೈದ್ಯ ಡಾ.ಎನ್. ನಿತ್ಯಾನಂದ ರಾವ್, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಜಿ. ಭರತ್ ರಾಜ್, ವೈದ್ಯರುಗಳಾದ ಡಾ.ಹರೀಶ್ ಪೈ, ಡಾ.ಸುರೇಶ್, ಡಾ.ನಂದಕಿಶೋರ್ ಲಾಹೋಟಿ, ಡಾ.ಗಿರೀಶ್ ಕುಮಾರ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: Dr. Shantharama ShettyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಾ. ಎಂ. ಶಾಂತರಾಮಶೆಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಭೀಷ್ಮ ಎಲ್.ಕೆ. ಅಡ್ವಾಣಿಗೆ `ಭಾರತರತ್ನ’ದ ಗೌರವ

Next Post

This budget is roadmap to achieve PM Modi’s vision of a Developed Bharat: Amit Shah

kalpa News

kalpa News

Next Post
This budget is roadmap to achieve PM Modi’s vision of a Developed Bharat: Amit Shah

This budget is roadmap to achieve PM Modi’s vision of a Developed Bharat: Amit Shah

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL